Udupi : ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರನ್ನೇ ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ – ಸುಳ್ಳು ಕೇಸ್ ದಾಖಲಿಸಿದ್ದೇ ಕಾರಣ ಅಂತೆ..!!

20240702 185730
Spread the love

ನ್ಯೂಸ್ ಆ್ಯರೋ : ಪಕ್ಷ ವಿರೋಧಿ ಚಟುವಟಿಕೆಗಾಗಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದಿಂದ ಬಿಜೆಪಿಯು ಉಚ್ಚಾಟಿಸಿದೆ.

ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಡಿ.ನಾಯ್ಕ್ ಅವರು ಪಕ್ಷದ ಚೌಕಟ್ಟು ಮೀರಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರು ಮತ್ತು ನಾಯಕರ ಮೇಲೆ ಸುಳ್ಳು ಕೇಸನ್ನು ದಾಖಲಿಸಿದ್ದು ಪಕ್ಷಕ್ಕೆ ತಾವು ಮುಜುಗರ ಮಾಡುವಂತೆ ಸನ್ನಿವೇಶವನ್ನು ನಿರ್ಮಾಣ ಮಾಡಿದ್ದು, ಇವರು ಈಗಾಗಲೇ ಪಂಚಾಯತ್‌ಗೆ ಸಂಬಂಧಪಟ್ಟ ಕೆಲವೊಂದು ನಿರ್ಧಾರಗಳನ್ನು ಪಕ್ಷದ ಪಂಚಾಯತ್ ಸದಸ್ಯರ ಗಮನಕ್ಕೆ ತರದೆ ಭ್ರಷ್ಟಾಚಾರ ಮಾಡಿದ್ದು ಮೇಲ್ನೋಟಕ್ಕೆ ಸಾಬೀತಾಗಿದೆ.

ಹಾಗಾಗಿ ತಮ್ಮ ಅಶಿಸ್ತಿನ ವರ್ತನೆಗಾಗಿ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಶೋಭಾ‌ ಅವರ ವಿರುದ್ಧ ಉಡುಪಿ ಬಿಜೆಪಿ ನಗರ ಅಧ್ಯಕ್ಷರಾದ ದಿನೇಶ್ ಅಮೀನ್ ಪ್ರಕಟಣೆ ಹೊರಡಿಸಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!