ಉಡುಪಿ : ಮೆಹಂದಿ ಸಂಭ್ರಮದಂದೇ ಮಧುಮಗ ಮನೆ ಬಿಟ್ಟು ಪರಾರಿ – ಕಂಗಾಲಾದ ಪೋಷಕರು, ಮುರಿದು ಬಿತ್ತು ಮದುವೆ..!!
ನ್ಯೂಸ್ ಆ್ಯರೋ : ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಿನ್ನೆ ಉಡುಪಿಯಲ್ಲಿ ನಡೆದಿದೆ.
ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಲಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ವೃತ್ತಿಯಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು.
ಅದರಂತೆ 18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣ ಗಳನ್ನು ಮನೆಯಲ್ಲಿಟ್ಟು ಕೆಲವು ವಸ್ತುಗಳನ್ನು ತರಲು ಇದೆ ಎಂದು ಮನೆಯವರಲ್ಲಿ ಹೇಳಿ, ಮೊಬೈಲ್, ಕೈಯಲ್ಲಿದ್ದ ಚಿನ್ನದ ಬ್ರಾಸ್‌ಲೇಟ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾನೆ.
ಮೆಹಂದಿಯ ಸಂಭ್ರಮದಲ್ಲಿ ಇದ್ದ ಮನೆಯವರು ಹುಡುಗ ಮನೆಗೆ ಬಾರದೆ ಇರುವುದರಿಂದ ಗಾಬರಿಯಿಂದ ಹುಡುಕಾಟದಲ್ಲಿ ತೊಡಗಿದರು. ಬಳಿಕ ಹುಡುಗ ನಾಪತ್ತೆ ವಿಷಯ ತಿಳಿದು ಬಂದ ಅತಿಥಿಗಳೆಲ್ಲರೂ ವಾಪಸು ತೆರಳಿದ್ದು, ಮದುವೆ ಕಾರ್ಯಕ್ರಮ ರದ್ದಾಗಿದೆ.
Leave a Comment