ಹರಿಯಾಣದಲ್ಲಿ ಇಂದು 1031 ಅಭ್ಯರ್ಥಿಗಳ ಭವಿಷ್ಯ ಪ್ರಕಟ: ಯಾರು ಗೆಲ್ತಾರೆ? ಯಾರು ಸೋಲ್ತಾರೆ ?
ನ್ಯೂಸ್ ಆ್ಯರೋ: ಬಹು ನಿರೀಕ್ಷಿತ ಹರಿಯಾಣ, ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕೌಂಟ್ಡೌನ್ ಶುರುವಾಗಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ. ಹರಿಯಾಣದಲ್ಲಿ 1031 ಅಭ್ಯರ್ಥಿಗಳು ಕಣದಲ್ಲಿದ್ದರೆ, ಕಣಿವೆ ನಾಡಿನಲ್ಲಿ 873 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ ಆಗಲಿದೆ.
ಎರಡು ರಾಜ್ಯದ ಮತದಾರರು ಅಭ್ಯರ್ಥಿಗಳ ಹಣೆಬರಹ ಬರೆದಿದ್ದು, ಇಂದು ಭವಿಷ್ಯ ಪ್ರಕಟವಾಗಲಿದೆ. ಯಾರು ಗೆಲ್ತಾರೆ? ಯಾರು ಸೋಲ್ತಾರೆ ಅನ್ನೋ ಲೆಕ್ಕಾಚಾರ ಜೋರಾಗಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಹಿ ಸುದ್ದಿ ಸಿಕ್ಕಿದ್ದು, ಬಿಜೆಪಿ ಪಕ್ಷಕ್ಕೆ ಅಚ್ಚರಿ ಎದುರಾಗಿದೆ. ಹಾಗಾಗಿ ಇಂದಿನ ಫಲಿತಾಂಶ ಭಾರೀ ಕುತೂಹಲ ಮೂಡಿಸಿದೆ.
ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣೋತ್ತರ ಸಮೀಕ್ಷೆಯಲ್ಲಿ ಅಚ್ಚರಿ ಫಲಿತಾಂಶ ಬಯಲಾಗಿದೆ. ಹರಿಯಾಣದಲ್ಲಿ ಬಿಜೆಪಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಸಿಗುವ ಸುಳಿವು ಸಿಕ್ಕಿದೆ. ಬಹುತೇಕ ಚುನಾವಣಾ ಸಮೀಕ್ಷೆಗಳು ಕಾಂಗ್ರೆಸ್ಗೆ ಬಹುಪರಾಕ್ ಎಂದಿವೆ. ಹ್ಯಾಟ್ರಿಕ್ ಗೆಲುವು ಕಾಣೋ ಕನಸು ಕಂಡಿದ್ದ ಬಿಜೆಪಿ ಪಕ್ಷಕ್ಕೆ ನಿರಾಸೆ ಆಗಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಹರಿಯಾಣದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು ಸರ್ಕಾರ ರಚಿಸುವ ಮ್ಯಾಜಿಕ್ ನಂಬರ್ 45 ಸ್ಥಾನಗಳು.
ಇನ್ನು ಜಮ್ಮು-ಕಾಶ್ಮೀರದಲ್ಲಿ 10 ವರ್ಷದ ಬಳಿಕ ಚುನಾವಣೆ ನಡೆದಿದೆ. ತಮ್ಮ ನೆಚ್ಚಿನ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿರುವ ಜಮ್ಮು-ಕಾಶ್ಮೀರದ ಮತದಾರರು ಅತಂತ್ರ ಫಲಿತಾಂಶದ ಭವಿಷ್ಯ ನುಡಿದಿದ್ದಾರೆ ಎಂದು ಸಮೀಕ್ಷೆ ಹೇಳಿವೆ. ಹೀಗಾಗಿ ಹರ್ಯಾಣದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್ ಕೂಡ 10 ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದೆ.
Leave a Comment