ಹರಿಯಾಣ ಸೋಲು ಒಪ್ಪಿಕೊಳ್ಳದ ʼಕೈʼ: ಬೇರೆಯದ್ದೇ ಆರೋಪ ಮಾಡಿದ ನಾಯಕರು
ನ್ಯೂಸ್ ಆ್ಯರೋ: ಹರಿಯಾಣದಲ್ಲಿ ಸಮೀಕ್ಷೆಗಳನ್ನೇ ತಲೆಕೆಳಗಾಗಿಸಿ ನಿರೀಕ್ಷೆ ಮೀರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಆದ್ರೆ ಸಮೀಕ್ಷೆಯನ್ನ ನಂಬಿದ್ದ ಕಾಂಗ್ರೆಸ್ಗೆ ಬಿಗ್ ಶಾಕ್ ಆಗಿದೆ. ಬೆನ್ನಲ್ಲೇ ಬಿಜೆಪಿ ಮೋಸದಿಂದ ಗೆಲುವು ಸಾಧಿಸಿದೆ ಎಂದು ಆರೋಪಿಸಿದೆ.
ಹರಿಯಾಣದಲ್ಲಿನ ಚುನಾವಣಾ ಫಲಿತಾಂಶಗಳು ಅನಿರೀಕ್ಷಿತ ಮತ್ತು ಆಘಾತಕಾರಿ. ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಹರಿಯಾಣದ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತ, ಆಶ್ಚರ್ಯಕರವಾಗಿದೆ. ಇದು ವಾಸ್ತವಕ್ಕೆ ವಿರುದ್ಧವಾಗಿದೆ ಅಂತ ಹೇಳಿದ್ದಾರೆ.
“ಹರಿಯಾಣದಲ್ಲಿ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತ ಮತ್ತು ಸ್ವೀಕಾರಾರ್ಹವಲ್ಲ. ಹಿಸಾರ್, ಮಹೇಂದ್ರಗಢ ಮತ್ತು ಪಾಣಿಪತ್‌ನಿಂದ ಇವಿಎಂಗಳಲ್ಲಿನ ವ್ಯತ್ಯಾಸದ ಕುರಿತು ನಮಗೆ ಅನೇಕ ದೂರುಗಳು ಬರುತ್ತಿವೆ. ನಮ್ಮ ಅಭ್ಯರ್ಥಿಗಳು ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ನಾವು ಈ ಎಲ್ಲಾ ದೂರುಗಳನ್ನು ಚುನಾವಣಾ ಆಯೋಗಕ್ಕೆ ನೀಡುತ್ತಿದ್ದೇವೆ” ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಹೇಳಿದ್ದಾರೆ.
ಇತ್ತ ಹರಿಯಾಣದಲ್ಲಿ ಜಿಲೇಬಿ ವಿಚಾರವಿಟ್ಟು ಬಿಜೆಪಿ ವಿರುದ್ಧ ಹರಿಹಾಯ್ದಿದ್ದ ರಾಹುಲ್ ಗಾಂಧಿಗೆ ಅದೇ ಜಿಲೇಬಿಯನ್ನೇ ಬಳಸಿ ತಿರುಗೇಟು ನೀಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಪಕ್ಷದ ಗೆಲುವಿನ ಸಿಹಿಯಾಗಿ ಅದೇ ಜಿಲೇಬಿಗಳನ್ನ ಕಾಂಗ್ರೆಸ್ ಕಚೇರಿಗೆ ತಲುಪಿಸಿದ್ದಾರೆ. ಒಟ್ಟಾರೆ.. ಕಾಂಗ್ರೆಸ್ ಗ್ಯಾರಂಟಿಗಳಿಗೆ ಮಾರು ಹೋಗದೆ ಹರಿಯಾಣ ಜನ ಬಿಜೆಪಿ ಕೈ ಹಿಡಿದಿದ್ದಾರೆ.
Leave a Comment