ಹಾಸನಾಂಬ ದೇವಾಲಯ ಓಪನ್ ಗೆ ಮುಹೂರ್ತ ಫಿಕ್ಸ್; 9 ದಿನ ದರ್ಶನಕ್ಕೆ ಅವಕಾಶ, ಆನ್​​ಲೈನ್​ ಬುಕ್ಕಿಂಗ್​ ಲಭ್ಯ

Hasanamba Festival
Spread the love

ನ್ಯೂಸ್ ಆ್ಯರೋ: ಹಾಸನಾಂಬ ದೇಗುಲದ ಬಾಗಿಲನ್ನು ಗುರುವಾರ (ಅ.24) ರಂದು ತೆರೆಯಲಾಗುತ್ತದೆ. ನವೆಂಬರ್ 3ರವರೆಗು ಮಾತ್ರ ದೇಗುಲದ ಬಾಗಿಲು ತೆರೆದಿರುತ್ತದೆ. ವರ್ಷದಿಂದ ವರ್ಷಕ್ಕೆ ಹಲವು ಆಕರ್ಷಣೆಗಳೊಂದಿಗೆ ಗಮನ ಸೆಳೆಯುತ್ತಿರುವ ಹಾಸನಾಂಬೆ ಉತ್ಸವದಲ್ಲಿ ಈ ವರ್ಷ ದಸರಾ ಮಾದರಿಯ ದೀಪಾಲಂಕಾರ, ಇದೇ ಮೊದಲ ಬಾರಿಗೆ ಫಲಪುಷ್ಪ ಪ್ರದರ್ಶನ, ಹಾಟ್ ಏರ್ ಬಲೂನ್, ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಅಕ್ಟೋಬರ್ 24ರ ಗುರುವಾರ ಮದ್ಯಾಹ್ನ 12 ಗಂಟೆಗೆ ದೇಗುಲದ ಗರ್ಭಗುಡಿ ಬಾಗಿಲು ತೆರೆಯುತ್ತದೆ. ಕಳೆದ ಬಾರಿ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಭಕ್ತರು ಬರುವ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದ್ದು, ಇದಕ್ಕಾಗಿ ಭರ್ಜರಿ ತಯಾರಿ ನಡೆಸಿದೆ. ದೇಗುಲವನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿದ್ದು ದೇಗುಲದ ಆವರಣದಲ್ಲಿ ಭಕ್ತರ ದರ್ಶನಕ್ಕಾಗಿ ಸರತಿ ಸಾಲುಗಳ ಬ್ಯಾರಿಕೇಡ್, ಸಾಂಪ್ರದಾಯಿಕ ಮಾದರಿಯ ಮಾಡೆಲ್​ಗಳು, ಮಳೆ, ಬಿಸಿಲಿನಿಂದ ರಕ್ಷಣೆಗಾಗಿ ಜ್ಮನ್ ಟೆಂಟ್ ಮತ್ತು ದೊನ್ನೆ ಪ್ರಸಾದ ವಿತರಣೆಗೂ ವ್ಯವಸ್ಥೆ ಮಾಡಲಾಗಿದೆ.

Hassan 1

ವರ್ಷದಿಂದ ವರ್ಷಕ್ಕೆ ಹಲವು ವಿಶೇಷತೆಗಳನ್ನು ಒಳಗೊಂಡು ನಡೆಯುತ್ತಿರುವ ಹಾಸನಾಂಬೆ ದೇವಿ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾಮಹೋತ್ಸವದಲ್ಲಿ ಈ ಬಾರಿ ನಗರದಲ್ಲಿ ಮೈಸೂರು ದಸರಾ ಮಾದರಿಯ ಚಿತ್ತಾಕರ್ಷಕ ಲೈಟಿಂಗ್ ಮಾಡಲಾಗಿದೆ. ಲೈಟಿಂಗ್ ವೀಕ್ಷಣೆಗೆ ಡಬಲ್ ಡೆಕ್ಕರ್ ಬಸ್ ಇರಲಿದೆ. ಈ ವರ್ಷ ಅಕ್ಟೋಬರ್ 24ರ ಮದ್ಯಾಹ್ನ ದೇಗುಲದ ಬಾಗಿಲು ತೆರೆದರೆ ನವೆಂಬರ್ 3ಕ್ಕೆ ಮದ್ಯಾಹ್ನ 12ಕ್ಕೆ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತೆ.

ಒಟ್ಟು 11 ದಿನ ದೇಗುಲದ ಬಾಗಿಲು ತೆರೆದಿರಲಿದೆ. ಆದರೆ 9 ದಿನಗಳು ಮಾತ್ರ ಭಕ್ತರ ದರ್ಶನಕ್ಕೆ ಅವಕಾಶ ಸಿಗಲಿದೆ. ದಿನದ 24 ಗಂಟೆಗಳೂ ಕೂಡ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಭಕ್ತರಿಗೆ ದರ್ಶನಕ್ಕೆ ಬೇಕಾದ ವಿಶೇಷ ವ್ಯವಸ್ಥೆ ಮಾಡಲಾಗಿದೆ. ನೇರ ದರ್ಶನ ಪಡೆಯ ಬಯಸುವ ಭಕ್ತರಿಗೆ 1000 ರೂ. ಟಿಕೆಟ್ 300 ರೂ. ಟಿಕೆಟ್ ಹಾಗೂ ವಿಶೇಷ ಗಣ್ಯರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಹಾಗೂ ಸಾಮಾನ್ಯ ಭಕ್ತರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಆನ್​​ಲೈನ್​ ಮೂಲಕ ದೇವಿಯ ದರ್ಶಕ್ಕೆ ಬುಕ್ಕಿಂಗ್​ ಲಭ್ಯವಿದೆ ಎಂದು ಅರ್ಚಕರು ತಿಳಿಸಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!