ಚಳಿಗಾಲದಲ್ಲಿ ಬಿಸಿನೀರಿನ ಸ್ನಾನದಿಂದ ವೀರ್ಯದ ಗುಣಮಟ್ಟ ಇಳಿಕೆ – ಯಾರೆಲ್ಲ ಬಿಸಿನೀರಿನ ಸ್ನಾನ ಮಾಡಬಹುದು?

ಚಳಿಗಾಲದಲ್ಲಿ ಬಿಸಿನೀರಿನ ಸ್ನಾನದಿಂದ ವೀರ್ಯದ ಗುಣಮಟ್ಟ ಇಳಿಕೆ – ಯಾರೆಲ್ಲ ಬಿಸಿನೀರಿನ ಸ್ನಾನ ಮಾಡಬಹುದು?

ನ್ಯೂಸ್ ಆ್ಯರೋ : ಚಳಿಗಾಲದಲ್ಲಿ ತಣ್ಣೀರು ಸ್ನಾನ ಅಂದರೆ ಬಹುತೇಕ ಮಂದಿ ಹಿಂದೇಟು ಹಾಕುತ್ತಾರೆ. ಕೆಲವರು ಬಿಸಿ ಬಿಸಿ ನೀರಿನಲ್ಲಿ ಸ್ನಾನ ಮಾಡಲು ಇಷ್ಟ ಪಡುತ್ತಾರೆ. ಆದರೆ, ಚಳಿಗಾಲದಲ್ಲಿ ಬಿಸಿನೀರಿನ ಸ್ನಾನ ಆರೋಗ್ಯದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದರ ಕುರಿತು ಅಧ್ಯಯನ ನಡೆದಿದೆ.

ಚಳಿಗಾಲದಲ್ಲಿ ಬಿಸಿನೀರಿನ ಸ್ನಾನ ಮಧುಮೇಹಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ತಜ್ಞರು ಹೇಳುತ್ತಾರೆ. ಬಿಸಿನೀರಿನಲ್ಲಿ ದಿನನಿತ್ಯ ಸ್ನಾನ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತದೆ. ಬಿಸಿನೀರಿನಲ್ಲಿ ಸ್ನಾನ ಮಾಡುವುದರಿಂದ ತೂಕ ಇಳಿಕೆಗೂ ಸಹಕಾರಿ.

ನಿದ್ರಾಹೀನತೆಯಿಂದ ಬಳಲುತ್ತಿರುವವರು‌ ರಾತ್ರಿ ಮಲಗುವ ಮುನ್ನ ಬಿಸಿನೀರಿನ ಸ್ನಾನ ಮಾಡಬಹುದು. ಇದು ದೇಹವನ್ನು ಸ್ವಚ್ಛವಾಗಿಡುತ್ತದೆ. ಅಲ್ಲದೆ ಬಿಸಿ ನೀರು ರಕ್ತದೊತ್ತಡವನ್ನು ನಿಯಂತ್ರಣದಲ್ಲಿರಿಸುತ್ತದೆ. ಅಲ್ಲದೆ ಹೃದಯವನ್ನು ಕ್ರಿಯಾಶೀಲವಾಗಿರಿಸುತ್ತದೆ ಎಂಬ ಮಾಹಿತಿ ಅಧ್ಯಯನದಿಂದ ಹೊರಬಿದ್ದಿದೆ.

ಬಿಸಿನೀರಿನ ಬಳಕೆಯು ಚರ್ಮದಲ್ಲಿನ ತೇವಾಂಶವನ್ನು ಕಡಿಮೆ ಮಾಡುತ್ತದೆ. ಅದರ ಪರಿಣಾಮವಾಗಿ ಚರ್ಮವು ಒರಟಾಗುತ್ತದೆ. ಅದರಲ್ಲೂ ಈಗಾಗಲೇ ಒಣ ತ್ವಚೆಯ ಸಮಸ್ಯೆಯಿಂದ ಬಳಲುತ್ತಿರುವವರು ಬಿಸಿ ನೀರನ್ನು ಬಳಸುವುದನ್ನು ತಪ್ಪಿಸಬೇಕು. ಅಲ್ಲದೆ, ಬಿಸಿ ನೀರು ನಮ್ಮ ಕೂದಲನ್ನು ದುರ್ಬಲಗೊಳಿಸುತ್ತದೆ. ಪರಿಣಾಮವಾಗಿ, ಕೂದಲು ಉದುರುವಿಕೆ ಪ್ರಮಾಣವು ಹೆಚ್ಚಾಗುತ್ತದೆ. ಅತಿಯಾದ ಬಿಸಿನೀರು ನಮ್ಮ ಕೂದಲಿನ ನೈಸರ್ಗಿಕ ತೇವಾಂಶವನ್ನು ತೆಗೆದುಹಾಕುತ್ತದೆ ಎಂಬುದು ಬಹಿರಂಗಗೊಂಡಿದೆ.

ಬಿಸಿ ನೀರಿನಲ್ಲಿ ಸ್ನಾನ ಮಾಡುವುದರಿಂದ ಹುಡುಗರಲ್ಲಿ ಫಲವತ್ತತೆ ಕಡಿಮೆಯಾಗುತ್ತದೆ ಎಂದು ಅಧ್ಯಯನ ತಿಳಿಸಿವೆ. ಬಿಸಿನೀರಿನಲ್ಲಿ ದೀರ್ಘಕಾಲ ಸ್ನಾನ ಮಾಡುವ ಹುಡುಗರ ವೀರ್ಯದ ಗುಣಮಟ್ಟ ಕಡಿಮೆಯಾಗಿ ಮಕ್ಕಳಾಗುವಲ್ಲಿ ಸಮಸ್ಯೆ ಎದುರಾಗಬಹುದು. ಹಾಗಾಗಿ ಹುಡುಗರು ಬಿಸಿ ನೀರಿನಿಂದ ಅತಿಯಾಗಿ ಸ್ನಾನ ಮಾಡಬಾರದು ಎಂಬ ಅಂಶ ಅಧ್ಯಯನದಿಂದ ಹೊರಬಿದ್ದಿದೆ.

ಹುಡುಗಿಯರು ಶಾಂಪೂ ಬಳಸುವಾಗ ಆದಷ್ಟು ಕಡಿಮೆ ಬಿಸಿ ನೀರನ್ನು ಬಳಸುತ್ತಾರೆ. ಹಾಗಾಗಿ ದೇಹದ ತೇವಾಂಶವನ್ನು ಉಳಿಸಿಕೊಳ್ಳಲು‌ ಬಾಡಿ ಲೋಷನ್‌ ಹಚ್ಚುವುದು ಉತ್ತಮ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *