ಸೋಯಾಬಿನ್ ಸೇವನೆಯಿಂದ ಆರೋಗ್ಯಕ್ಕಿದೆ ಭಾರೀ ಲಾಭ – ಏನೆಲ್ಲ ಪ್ರಯೋಜನಗಳಿವೆ ಗೊತ್ತಾ?

ಸೋಯಾಬಿನ್ ಸೇವನೆಯಿಂದ ಆರೋಗ್ಯಕ್ಕಿದೆ ಭಾರೀ ಲಾಭ – ಏನೆಲ್ಲ ಪ್ರಯೋಜನಗಳಿವೆ ಗೊತ್ತಾ?

ನ್ಯೂಸ್ ಆ್ಯರೋ‌ : ಸಹಜವಾಗಿ ಸೋಯಾಬೀನ್ ಎಲ್ಲರಿಗೂ ಇಷ್ಟವಾಗುತ್ತೆ. ತಿನ್ನಲು ಸ್ವಲ್ಪ ಮಟ್ಟಿಗೆ ಚಿಕನ್ ರೀತಿ ಅನಿಸುತ್ತೆ. ಇದರಿಂದ ಮಾಡುವ ಫ್ರೈ, ಪಲಾವ್, ಗ್ರೇವಿ ಎಲ್ಲವೂ ರುಚಿಯಾಗಿರುತ್ತದೆ. ನಾಲಿಗೆಗೂ ಹೆಚ್ಚು ರುಚಿ ಕೊಡುವ ಸೋಯಾ ಬೀನ್ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಸೋಯಾ ಹಿಟ್ಟಿನಿಂದ ಚಿಕ್ಕ ಚಿಕ್ಕ ತುಂಡುಗಳಾಗಿ ಸೋಯಾಬೀನ್ ರೆಡಿಮಾಡಲಾಗುತ್ತದೆ. ಸೋಯಾಬಿನ್ ಹೆಚ್ಚು ಪೌಷ್ಟಿಕಾಂಶದಿಂದ ಕೂಡಿದೆ.

ಮೂಳೆಗಳಿಗೆ ಒಳ್ಳೆಯದು

ಸೋಯಾ ತುಂಡುಗಳಲ್ಲಿ ಖನಿಜಗಳು, ಕ್ಯಾಲ್ಸಿಯಂ, ತಾಮ್ರ, ಸತು, ಜೀವಸತ್ವಗಳು ಮತ್ತು ಸೆಲೆನಿಯಂನಲ್ಲಿ ಸಮೃದ್ಧವಾಗಿವೆ. ಹೀಗಾಗಿ ಇದನ್ನು ಸೇವಿಸುವುದರಿಂದ ಮೂಳೆಗಳಿಗೆ ತುಂಬಾ ಒಳ್ಳೆಯದು. ಇದು ಮೂಳೆಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಮೂಳೆಗಳನ್ನು ಗಟ್ಟಿಗೊಳಿಸುವ ಜೊತೆಗೆ, ಗುಣಪಡಿಸುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತವೆ.

  • ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ

ಹೆಚ್ಚಿನ ಎಲ್ಡಿಎಲ್ ಕೊಲೆಸ್ಟ್ರಾಲ್ ಹೊಂದಿರುವ ಜನರು ಪಾರ್ಶ್ವವಾಯು ಮತ್ತು ಹೃದಯಾಘಾತದಂತಹ ಹೃದಯ ಸಂಬಂಧಿ ರೋಗಗಳನ್ನು ಹೊಂದಿರುತ್ತಾರೆ. ಸೋಯಾಬೀನ್ ತಿನ್ನುವುದರಿಂದ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಬಹುದು. ಇದರಿಂದ ಹೃದಯ ಸಂಬಂಧಿ ರೋಗಗಳನ್ನು ತಡೆಯಬಹುದು.

  • ದೇಹದ ತೂಕ ನಿಯಂತ್ರಿಸಲು

ಸೋಯಾಬೀನ್ ದೇಹದ ತೂಕವನ್ನು ಕಡಿಮೆ ಮಾಡುತ್ತದೆ. ಅಧ್ಯಯನದ ಪ್ರಕಾರ, ಸೋಯಾ ತುಂಡುಗಳು ಅಂಗಗಳ ಸುತ್ತ ಸಂಗ್ರಹವಾಗುವ ಅಧಿಕ ಕೊಬ್ಬನ್ನು ಕಡಿಮೆ ಮಾಡುತ್ತದೆ. ಹೀಗಾಗಿ ದೇಹದ ತೂಕವನ್ನು ಇಳಿಸುವವರು ಸೋಯಾಬೀನ್ ಸೇವಿಸಬಹುದು. ಅಲ್ಲದೆ, ಸೋಯಾ ತುಂಡುಗಳಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ಸ್ನಾಯುಗಳ ಬೆಳವಣಿಗೆಗೆ ಪ್ರಯೋಜನಕಾರಿಯಾಗಿದೆ.

  • ಜೀರ್ಣಕ್ರಿಯೆಗೆ ಸಹಾಯಕ

ಸೋಯಾ ತುಂಡುಗಳಲ್ಲಿ ಫೈಬರ್ ಸಮೃದ್ಧವಾಗಿದ್ದು, ಜೀರ್ಣಾಂಗ ವ್ಯವಸ್ಥೆಯಲ್ಲಿ ಫೈಬರ್ ಪ್ರಮುಖ ಪಾತ್ರ ವಹಿಸುತ್ತದೆ. ಇದು ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಇದರ ಜೊತೆಗೆ ಸೋಯಾ ತುಂಡುಗಳಲ್ಲಿ ಒಲಿಗೊಸ್ಯಾಕರೈಡ್ ಎಂಬ ಕಾರ್ಬೋಹೈಡ್ರೇಟ್ ಇದ್ದು, ಜೀರ್ಣಕ್ರಿಯೆಗೆ ಹೆಚ್ಚು ಪ್ರಯೋಜನವಾಗಿದೆ.

  • ಚರ್ಮ ಮತ್ತು ಕೂದಲಿಗೆ ಒಳ್ಳೆಯದು

ಸೋಯಾ ತುಂಡುಗಳನ್ನು ಸೇವಿಸುವುದರಿಂದ ಚರ್ಮ ಮತ್ತು ಕೂದಲಿಗೆ ಹೆಚ್ಚು ಪ್ರಯೋಜನಕಾರಿ. ಚರ್ಮವನ್ನು ಬಲಪಡಿಸುವ ಜೊತೆಗೆ ಚರ್ಮದ ಮೇಲೆ ಮೂಡುವ ಸುಕ್ಕನ್ನು ಕಡಿಮೆ ಮಾಡುತ್ತದೆ. ಅಲ್ಲದೇ ಇದು ಒಣ ಕೂದಲಿನ ಸಮಸ್ಯೆಯನ್ನು ನಿವಾರಿಸುತ್ತದೆ. ಮತ್ತು ಬಲಪಡಿಸುತ್ತದೆ. ಕೂದಲು ಹೆಚ್ಚು ಉದುರುತ್ತಿದ್ದರೆ, ಇದನ್ನೂ ತಡೆಯುವ ಸಾಮರ್ಥ್ಯ ಸೋಯಾಬೀನ್ ಹೊಂದಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *