ಸಚಿವೆ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ; ಇಂದು ಸಿಟಿ ರವಿ ವಿರುದ್ಧ ಪ್ರತಿಭಟನೆಗೆ ಕರೆ ಕೊಟ್ಟ ಹೆಬ್ಬಾಳ್ಕರ್ ಬೆಂಬಲಿಗರು

ನ್ಯೂಸ್ ಆ್ಯರೋ: ವಿಧಾನಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ಪೊಲೀಸರು ಬಂಧಿಸಿದ್ದರು. ಆದರೆ ಇಂದು ಇದೇ ಪ್ರಕರಣದಲ್ಲಿ ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಆದೇಶಿಸಿದೆ. ಮಧ್ಯಂತರ ಆದೇಶ ಸಿಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಆದರೆ ಇಂದು ನಗರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಎಂಎಲ್ಸಿ ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಆದೇಶಿಸಿದ ಹಿನ್ನೆಲೆ ಬೆಳಗಾವಿಯಲ್ಲಿ ಇಂದು ಬೆಳಗ್ಗೆ 11ಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಸಿಪಿಎಡ್ ಮೈದಾನದಿಂದ ಡಿಸಿ ಕಚೇರಿವರೆಗೂ ಮೆರವಣಿಗೆ ನಡೆಯಲಿದೆ. ಸದ್ಯ ಎಂಎಲ್ಸಿ ಸ್ಥಾನದಿಂದ ಸಿ.ಟಿ.ರವಿ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.
ಇನ್ನು ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ಹಿನ್ನೆಲೆ ಎಲ್ಲೆಡೆ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಚಿಕ್ಕಮಗಳೂರಿನ ಬಸವನಹಳ್ಳಿ ರಸ್ತೆಯ ಸಿ.ಟಿ.ರವಿ ಮನೆ ಮುಂದೆ ಕಾರ್ಯಕರ್ತರಿಂದ ಸಂಭ್ರಮಸಲಾಗಿದ್ದು, ಸಿ.ಟಿ.ರವಿ ಸೋದರಿ ಮತ್ತು ಮಗ ಭಾಗಿ ಆಗಿದ್ದಾರೆ.
ಸಿಟಿ ರವಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಲಾಗಿದ್ದು, ಅಪ್ಪನ ಪರ ಘೋಷಣೆ ಕೂಗಿ ಮಗ ಸೂರ್ಯ ಸಂಭ್ರಮಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ಹೊರಹಾಕಲಾಗಿದೆ.
Leave a Comment