ಪ್ರಜ್ವಲ್ ರೇವಣ್ಣನನ್ನು ಸೋಲಿಸಿದ್ದ ಶ್ರೇಯಸ್ ಪಟೇಲ್ ಸಂಸದ ಸ್ಥಾನಕ್ಕೆ ಕುತ್ತು?? – ಅಸಿಂಧು ಅರ್ಜಿಗೆ ನೋಟಿಸ್ ನೀಡಿದ ಹೈಕೋರ್ಟ್
ನ್ಯೂಸ್ ಆ್ಯರೋ : ಲೋಕಸಭೆ ಚುನಾವಣೆಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ವಕೀಲ ಡಿ. ದೇವರಾಜೇಗೌಡ ಪುತ್ರ ಡಿ. ಚರಣ್, ಹಾಸನದ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೇಯಸ್ ಪಟೇಲ್ ಅವರಿಗೆ ನೋಟಿಸ್ ನೀಡಿದೆ.
ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ಡಿ ದೇವರಾಜೆಗೌಡ ಪುತ್ರ ಡಿ. ಚರಣ್ ಅರ್ಜಿ ಸಲ್ಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಗೆ ಹೈಕೋರ್ಟ್ ನೋಟಿಸ್ ನೀಡಿದೆ.
ಶ್ರೇಯಸ್ ಪಟೇಲ್ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ಸಂಸದರಾಗಿ ಶ್ರೇಯಸ್ ಎಂ ಪಟೇಲ್ ಆಯ್ಕೆ ಅಸಿಂಧುಗೊಳಿಸುವಂತೆ ಮನವಿ ಮಾಡಲಾಗಿತ್ತು. ಹಿಂದಿನ 5 ವರ್ಷಗಳ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿಲ್ಲ ಎಂದು ದೂರಲಾಗಿದೆ.
ಅಲ್ಲದೇ ಪ್ರಮಾಣ ಪತ್ರದಲ್ಲಿ ಸಂಪೂರ್ಣವಾದ ಮಾಹಿತಿ ನೀಡಿಲ್ಲ. ಚುನಾವಣಾ ವೆಚ್ಚದ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಡಿ.ಚರಣ್ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಂಸದ ಶ್ರೇಯಸ್ ಪಟೇಲ್ ಅವರಿಗೆ ನೋಟಿಸ್ ನೀಡಿದ್ದು, ಶೀಘ್ರವಾಗಿ ಉತ್ತರಿಸುವಂತೆ ಸೂಚನೆ ನೀಡಿದೆ. ಸಂಸದ ಶ್ರೇಯಸ್ ಪಟೇಲ್ ಮಾಜಿ ಸಂಸದನಾಗಿದ್ದ ಪ್ರಜ್ವಲ್ ರೇವಣ್ಣನನ್ನು ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು.
Leave a Comment