ಟೊಮ್ಯಾಟೋ ರಕ್ಷಣೆಗೆ ಬೌನ್ಸರ್ ನೇಮಿಸಿದ್ದ ಅಂಗಡಿ ಮಾಲಕನ ಬಂಧನ – ಘಟನೆಗೆ ಕಾರಣವೇನು ಗೊತ್ತಾ?

ಟೊಮ್ಯಾಟೋ ರಕ್ಷಣೆಗೆ ಬೌನ್ಸರ್ ನೇಮಿಸಿದ್ದ ಅಂಗಡಿ ಮಾಲಕನ ಬಂಧನ – ಘಟನೆಗೆ ಕಾರಣವೇನು ಗೊತ್ತಾ?

ನ್ಯೂಸ್ ಆ್ಯರೋ‌ : ದೇಶದಲ್ಲಿ ಟೊಮ್ಯಾಟೋ ಬೆಲೆ ಗಗನಕ್ಕೇರಿದೆ. ಕೆಲವೆಡೆ ಇದರ ದರ ದ್ವಿಶತಕವನ್ನೂ ದಾಟಿ ಮುನ್ನುಗ್ಗುತ್ತಿದೆ. ಈ ಮಧ್ಯೆ ಟೊಮ್ಯಾಟೋ ಕಳವು ಪ್ರಕರಣವೂ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಟೊಮ್ಯಾಟೋ ರಕ್ಷಣೆಗೆಂದೇ ವಾರಣಾಸಿಯ ತರಕಾರಿ ವ್ಯಾಪಾರಿಯೊಬ್ಬರು 2 ಬೌನ್ಸರ್ ಗಳನ್ನು ನೇಮಿಸಿದ್ದರು. ಇದೀಗ ಆತ ಮತ್ತು ಆತನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಕಾರಣವೇನು?

ನಾರಾಯಣ್ ಯಾದವ್ ಮತ್ತು ಅವರ ಪುತ್ರ ವಿಕಾಸ್ ಯಾದವ್ ನನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು ತರಲೆಂದು ಟೊಮ್ಯಾಟೋ ಅಂಗಡಿ ಮಾಲಕ ಅಜಯ್ ಫೌಜಿ 2 ಬೌನ್ಸರ್ ಗಳನ್ನು ನೇಮಿಸಿಕೊಂಡಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದ.

ಅಜಯ್ ಫೌಜಿ ಸಮಾಜವಾದಿ ಪಕ್ಷದ ನಾಯಕನಾಗಿದ್ದು, ಸರಕಾರಕ್ಕೆ ಕೆಟ್ಟ ಹೆಸರು ತರಲೆಂದೇ ಬೌನ್ಸರ್ ಗಳನ್ನು ನೇಮಿಸಿರುವುದಾಗಿ ವಿಚಾರಣೆ ವೇಳೆ ತಿಳಿದು ಬಂದಿದೆ.

ಇದೇ ಕಾರಣಕ್ಕೆ ಫೌಜಿ ಹೆಸರಿನಲ್ಲಿ ಗಲಭೆಗೆ ಪ್ರಚೋದನೆ ಎಂಬ ಕಾರಣದಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *