ಈ ರಾಶಿಯವರ ದಾಂಪತ್ಯದಲ್ಲಿ ಅನಗತ್ಯ ವಾಗ್ವಾದ ನಡೆಯಬಹುದು; ಆರೋಗ್ಯದ ಬಗ್ಗೆ ಗಮನಹರಿಸುವುದು ಅವಶ್ಯಕ

horoscope
Spread the love

ಮೇಷ ರಾಶಿ: ಮಕ್ಕಳ ಭವಿಷ್ಯಕ್ಕೆ ಸಂಪತ್ತು ಮಾಡುವ ಯೋಚನೆ ಬರುವುದು. ಸಾಮಾಜಿಕ ಕಾರ್ಯಗಳಲ್ಲಿ ನಿಮಗೆ ಹೆಚ್ಚು ಆಸಕ್ತಿಯು ಇರುವುದು. ಪತ್ನಿಯ ಅನಗತ್ಯ ಖರ್ಚಿಗೆ ಕಡಿವಾಣ ಹಾಕುವಿರಿ. ಇದಕ್ಕಾಗಿ ವಾಗ್ವಾದವು ನಡೆಯಬಹುದು. ಮಕ್ಕಳನ್ನು ನಿರ್ಲಕ್ಷಿಸಿದರೆ ಕಷ್ಟವಾದೀತು. ನಿಮ್ಮ ಇಂದಿನ ಕೆಲಸಗಳನ್ನು ಬಾಕಿ ಉಳಿಸಿಕೊಳ್ಳಬೇಕಾದೀತು. ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಒಬ್ಬರೇ ತೆಗೆದುಕೊಳ್ಳದೇ ಪರಿಚಿತರನ್ನು ಕೇಳಿ. ಎಂದೋ ಆದ ದೈಹಿಕ ಪೀಡೆಯು ಪುನಃ ಕಾಣಿಸಿಕೊಳ್ಳಬಹುದು. ವಿವಾಹ ಸಂಭ್ರಮದ ವಾತಾವರಣ ಮನೆಯಲ್ಲಿ ಇರಲಿದೆ.

ವೃಷಭ ರಾಶಿ : ಹಿರಿಯರ ಮೇಲಿನ ಪ್ರೀತಿಯಿಂದ ನೀವು ಸೇವೆ ಮಾಡುವಿರಿ. ನಿಮ್ಮ ಸ್ಥಾನದ ರಕ್ಷಣೆಗಾಗಿ ಇನ್ನೊಬ್ಬರ ಮೇಲೆ ಆರೋಪವನ್ನು ಮಾಡುವಿರಿ. ಕೆಲವು ಕೆಲಸಗಳಿಗೆ ನೀವು ಆಲಸ್ಯವನ್ನು ತೋರುವಿರಿ. ನಿಮ್ಮ ಸಂಕಟಕ್ಕೆ ಸ್ಪಂದಿಸಿದವರನ್ನು ನೀವು ಗೌರವಿಸಿ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಏಕಾಗ್ರತೆಯ ಕೊರತೆ ಕಾಣಿಸುವುದು. ನಕಾರಾತ್ಮಕ ಆಲೋಚನೆಯನ್ನು ನೀವು ಕಡಿಮೆ ಮಾಡಿಕೊಳ್ಳುವುದು ಉತ್ತಮ. ನಿಮ್ಮ ಆಸಕ್ತಿಯ‌ ಕ್ಷೇತ್ರವೂ ನಿಮಗೆ ಇಷ್ಟವಾಗದೇ ಹೋಗುವುದು. ನಿಮ್ಮ ನಿರ್ಧಾರಗಳು ಬಲವಾದಂತೆ ಕಾರ್ಯಗಳಲ್ಲಿಯೂ ದೃಢತೆ ಇರಲಿ. ದಾಂಪತ್ಯದಲ್ಲಿ ಸಮಸ್ಯೆ ಎದುರಾಗಬಹುದು. ಉದ್ಯಮವು ಸಕ್ರಿಯವಾಗಿದ್ದು ವಿಸ್ತರಿಸುವ ಯೋಚನೆ ಮಾಡುವಿರಿ.

ಮಿಥುನ ರಾಶಿ : ಹಣವು ತಿರುಗಿ ಬರುವುದು ನಿಮಗೆ ಸಮಾಧಾನ ತರಲಿದೆ. ಹಣಕಾಸಿನ ವ್ಯವಹಾರದಿಂದ ನಿಮಗೆ ಅಪವಾದವು ಬರಬಹುದು. ದಾಂಪತ್ಯದಲ್ಲಿ ಅನಗತ್ಯ ವಾಗ್ವಾದಗಳು ನಡೆಯಬಹುದು. ಕುಟುಂಬದಲ್ಲಿ ಕೆಲವು ವಿಷಯಗಳನ್ನು ನಿಮಗೆ ಹೇಳದೇ ರಹಸ್ಯವಾಗಿ ಇಡುವರು. ಯಾರದೋ ಸಿಟ್ಟನ್ನು ಇನ್ನಾರದೋ ಮೇಲೆ ತೀರಿಸಿಕೊಳ್ಳುವಿರಿ. ಹಿತಶತ್ರುಗಳ ಬಾಧೆಯಿಂದ ತಪ್ಪಿಸಿಕೊಳ್ಳುವ ತನಕ ನಿಮ್ಮ ಯಾವ ಉದ್ಯೋಗವೂ ಊರ್ಜಿತವಾಗದು. ಮನಸ್ಸು ನಿರ್ಲಿಪ್ತವಾಗಿ ಇರುವುದು. ಇಂದಿನ ದಿನವನ್ನು ಆನಂದಿಸಲು, ಜವಾಬ್ದಾರಿಯ ಕೆಲಸಗಳನ್ನು ಪೂರೈಸುವತ್ತ ಗಮನವಿರಲಿ. ವೈಯುಕ್ತಿಕ ಸಂಬಂಧಗಳಲ್ಲಿ ಭಿನ್ನಾಭಿಪ್ರಾಯ ಬಾರದಂತೆ ನೋಡಿಕೊಳ್ಳಿ.

ಕರ್ಕಾಟಕ ರಾಶಿ : ಹಳೆಯ ಪ್ರೀತಿಯಿಂದ ನಿಮಗೆ ಕಷ್ಟವಾದೀತು. ನೀವು ಅಂದುಕೊಂಡ ಕೆಲಸವು ಆಗದೇಹೋದೀತು. ಸರ್ಕಾರಿ ದಾಖಲೆಗಳನ್ನು ಭದ್ರವಾಗಿ ಇರಿಕೊಳ್ಳಿ. ನಿಮ್ಮವರು ನಿಮ್ಮ ದೋಷವನ್ನೇ ಎತ್ತಿಹೇಳಬಹುದು. ಸಾಹಿತ್ಯದ ಆಸಕ್ತರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ತೊಡಗಿಕೊಳ್ಳುವರು. ಬುದ್ಧಿಯನ್ನು ಬಳಸಿ ನಿಮ್ಮ ಕಾರ್ಯವನ್ನು ಮಾಡಿಕೊಳ್ಳಿ. ಇನ್ನೊಬ್ಬರ ಮೇಲಿನ ಅಸಮಾಧಾನವನ್ನು ನೀವು ಯಾವುದೋ ಸಂದರ್ಭದಲ್ಲಿ ಹೊರಹಾಕುವಿರಿ. ವಾಸದ ಸ್ಥಳವನ್ನು ನೀವು ಬದಲಿಸಬೇಕಾಗಬಹುದು. ಯಾವುದೇ ಪ್ರೇರಣೆ ನಿಮಗೆ ಸಿಕ್ಕಿ, ಯೋಜನೆ ಬದಲಾಯಿಸುವಿರಿ.

ಸಿಂಹ ರಾಶಿ : ನೀವು ಕೈಗೊಂಡ ಪ್ರಯಾಣವು ಸುಖಕರವಾಗದೇ ಇರಬಹುದು. ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ಆಡಳಿತಕ್ಕೆ ಸಂಬಂಧಿಸಿದಂತೆ ಲೋಪ ದೋಷಗಳು ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭವನ್ನು ಎದುರಿಸುವಾಗ ಗೊತ್ತಿದ್ದೂ ಗೊತ್ತಿಲ್ಲದಂತೆ ಇರುವುದು ಒಳ್ಳೆಯದು. ಹಣಕಾಸಿನ ವಿಚಾರದಲ್ಲಿ ಗೊಂದಲವು ಬರಬಹುದು. ಆಪ್ತರ ಜೊತೆಗಿನ ಒಡನಾಟವು ನಿಮ್ಮ ಭಾರವಾದ ಮನಸ್ಸನ್ನು ಹಗುರಗೊಳಿಸುವುದು. ಆರೋಗ್ಯದ ಬಗ್ಗೆ ಗಮನಹರಿಸುವುದು ಅವಶ್ಯಕ.

ಕನ್ಯಾ ರಾಶಿ : ಆರ್ಥಿಕ ತೊಂದರೆಯನ್ನು ನೀವು ಸಲೀಸಾಗಿ ಸರಿಮಾಡಿಕೊಳ್ಳುವಿರಿ. ಸಮಯ ಹಾಗೂ ಸಂದರ್ಭಗಳನ್ನು ನೋಡಿ ನಿಮ್ಮ ವಿಚಾರವನ್ನು ಮೇಲಧಿಕಾರಿಗಳ ಜೊತೆ ಹಂಚಿಕೊಳ್ಳಿ. ವ್ಯಾಪರದ ವಹಿವಾಟನ್ನು ಮಾಡುತ್ತಿದ್ದರೆ ನಿಮಗೆ ಹೆಚ್ಚು ಕೆಲಸವೂ ಪ್ರಶಂಸೆಯೂ ಆರ್ಥಿಕಬಲವೂ ಬರಲಿದೆ. ಆಭರಣಗಳನ್ನು ಖರೀದಿಸುವ ಇಚ್ಛೆ ಇದ್ದರೆ ಖರೀದಿಸಿ. ವಿವಾಹದ ಮಾತುಕತೆಗಳು ನಿಮಗೆ ಖುಷಿ ಕೊಡುವುದು. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ.

Leave a Comment

Leave a Reply

Your email address will not be published. Required fields are marked *

error: Content is protected !!