ಚಂದ್ರಯಾನ-3: ವಿಕ್ರಮ್ ಲ್ಯಾಂಡರ್ ಸಂಪರ್ಕಕ್ಕೆ ಸಿಕ್ತು ಚಂದ್ರಯಾನ 2ರ ಆರ್ಬಿಟರ್ – ಮತ್ತೊಂದು ಖುಷಿಯ ಸಂಗತಿ ಹಂಚಿಕೊಂಡ ಇಸ್ರೋ

ಚಂದ್ರಯಾನ-3: ವಿಕ್ರಮ್ ಲ್ಯಾಂಡರ್ ಸಂಪರ್ಕಕ್ಕೆ ಸಿಕ್ತು ಚಂದ್ರಯಾನ 2ರ ಆರ್ಬಿಟರ್ – ಮತ್ತೊಂದು ಖುಷಿಯ ಸಂಗತಿ ಹಂಚಿಕೊಂಡ ಇಸ್ರೋ

ನ್ಯೂಸ್ ಆ್ಯರೋ‌ : ಚಂದ್ರಯಾನ-3 ಉಡಾವಣೆ ಮಾಡಿ ಯಶಸ್ವಿಯಾಗಿ ಸಾಗಲು ಕ್ರಮ ಕೈಗೊಂಡಿರುವ ಇಸ್ರೋ ಇದೀಗ ಅಪರೂಪದ ಮಾಹಿತಿಯೊಂದನ್ನು ಹಂಚಿಕೊಂಡಿದೆ. 4 ವರ್ಷಗಳಿಂದ ಚಂದ್ರನ ಕಕ್ಷೆಯಲ್ಲಿ ಸುತ್ತುತ್ತಿದ್ದ ಚಂದ್ರಯಾನ-2 ಆರ್ಬಿಟರ್ ಸೋಮವಾರ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಜೊತೆಗೆ ಸಂಪರ್ಕ ಸಾಧಿಸಿದೆ.

ಇಸ್ರೋ ಹೇಳಿದ್ದೇನು?

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇಸ್ರೋ, ಚಂದ್ರಯಾನ-2 ಆರ್ಬಿಟರ್ ಚಂದ್ರಯಾನ-3 ಲ್ಯಾಂಡರ್ ಮಾಡ್ಯುಲ್ ಅನ್ನು ಸ್ವಾಗತಿಸಿದೆ. ಇವೆರಡರ ನಡುವಿನ ಎರಡೂ ಕಡೆಯ ಸಂಪರ್ಕಗಳನ್ನು ಯಶಸ್ವಿಯಾಗಿ ಸಾಧಿಸಲಾಗಿದೆ ಎಂದು ಇಸ್ರೋ ಎಕ್ಸ್ (ಟ್ವಿಟರ್) ಮೂಲಕ ಹೇಳಿದೆ.

2019ರಲ್ಲಿ ನಡೆಸಿದ ಚಂದ್ರಯಾನ-2 ಯೋಜನೆಯ ಭಾಗವಾಗಿ ಆರ್ಬಿಟರ್ ಅನ್ನು ಚಂದ್ರನ ಕಕ್ಷೆಯಲ್ಲಿ ಯಶಸ್ವಿಯಾಗಿ ಇರಿಸಲಾಗಿತ್ತು. ಆದರೆ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲು ವಿಫಲವಾಗಿದ್ದರಿಂದ ಇದರ ಸಂವಹನ ತಪ್ಪಿ ಹೋಗಿತ್ತು. ಇದೀಗ ವಿಕ್ರಮ್ ಲ್ಯಾಂಡರ್ ನ ಸಂಪರ್ಕ ಸಿಕ್ಕಿದೆ.

ಇತ್ತ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಯಶಸ್ವಿಯಾಗಿ ಇಳಿಯಲು ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 23ರಂದು ಸಂಜೆ 6.04ಕ್ಕೆ ಈ ಐತಿಹಾಸಿಕ ಕಾರ್ಯ ನಡೆಯಲಿದೆ.

ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ಬಳಿಕ ತಾನು ಹೊತ್ತು ತಂದ ಪೇಲೋಡ್ ಗಳನ್ನು ಇಳಿಸಲಿದೆ. ಬಳಿಕ ಚಂದ್ರನ ಮೇಲೆ ಅಧ್ಯಯನ ನಡೆಯಲಿದೆ. ಆಗಸ್ಟ್ 23ರ ಸಂಜೆ 5.20ರಿಂದ ನೇರ ಪ್ರಸಾರ ಇರಲಿದೆ ಎಂದು ಇಸ್ರೋ ತಿಳಿಸಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *