40 ಸೆಂಟಿಮೀಟರ್ ಎತ್ತರ ಹಾರಿ ಅಷ್ಟೇ ದೂರ ಜಿಗಿದ ವಿಕ್ರಮ್‌ ಲ್ಯಾಂಡರ್ – ಬಾಹ್ಯಾಕಾಶ ಯೋಜನೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ಇಸ್ರೋ

40 ಸೆಂಟಿಮೀಟರ್ ಎತ್ತರ ಹಾರಿ ಅಷ್ಟೇ ದೂರ ಜಿಗಿದ ವಿಕ್ರಮ್‌ ಲ್ಯಾಂಡರ್ – ಬಾಹ್ಯಾಕಾಶ ಯೋಜನೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ಇಸ್ರೋ

ನ್ಯೂಸ್ ಆ್ಯರೋ : ಚಂದ್ರನ ಅಂಗಳದಲ್ಲಿರುವ ವಿಕ್ರಮ್​ ಲ್ಯಾಂಡರ್​, ತನ್ನ ಲ್ಯಾಂಡಿಂಗ್​ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಜಿಗಿಯುವ ಮೂಲಕ ಚಂದ್ರಯಾನ 3 ಮಿಷನ್ ಮತ್ತೊಂದು ಸಾಧನೆಯನ್ನು ಮಾಡಿದೆ.

ಚಂದ್ರನ ಮೇಲ್ಮೈಯಲ್ಲಿನ ಕುಪ್ಪಳಿಸುವ ಅಥವಾ ಹಾರುವ ತನ್ನ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಿದ್ದು, ಈ ಮೂಲಕ ತನ್ನ ಮಿಷನ್ ಉದ್ದೇಶಗಳನ್ನೂ ಚಂದ್ರಯಾನ-3 ಪೂರ್ಣಗೊಳಿಸಿದೆ. ಬಾಹ್ಯಾಕಾಶ ಯೋಜನೆಯಲ್ಲಿ ನಿಜಕ್ಕೂ ಇದೊಂದು ದೊಡ್ಡ ಮೈಲಿಗಲ್ಲು ಆಗಲಿದೆ. ಏಕೆಂದರೆ, ಮುಂದಿನ ದಿನಗಳಲ್ಲಿ ಮಾನವರನ್ನು ಚಂದ್ರನ ಅಂಗಳಕ್ಕೆ ಇಳಿಸಿದಾಗ ಅವರನ್ನು ಮತ್ತೆ ವಾಪಸ್ಸು ಕರೆತರಲು ಈ ಮಹತ್ವದ ಸಾಧನೆಯು ಪ್ರಮುಖ ಉತ್ತೇಜನವಾಗಿದೆ. ಚಂದ್ರನ ಮೇಲೆ ಮತ್ತೆ ಹಾರುವ ಅಥವಾ ಜಿಗಿಯುವ ಪ್ರಯೋಗದ ಯಶಸ್ವಿಯು ವಿಕ್ರಮ್​ ಲ್ಯಾಂಡರ್‌, ಚಂದ್ರನ ಭೂಪ್ರದೇಶದಲ್ಲಿ ಚಲಿಸುವ ಮತ್ತು ನ್ಯಾವಿಗೇಟ್ ಮಾಡುವ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ. ಇದು ಭವಿಷ್ಯದ ಪರಿಶೋಧನಾ ಕಾರ್ಯಾಚರಣೆಗಳಿಗೆ ನಿರ್ಣಾಯಕ ಸಾಮರ್ಥ್ಯವಾಗಿದೆ ಎಂದು ಇಸ್ರೋ ತಿಳಿಸಿದೆ.

ಸೂಚನೆ ಮೇರೆಗೆ ವಿಕ್ರಮ್​ ಲ್ಯಾಂಡರ್ ತನ್ನ ಇಂಜಿನ್‌ಗಳನ್ನು ಉರಿಸಿ, ಸುಮಾರು 40 ಸೆಂ.ಮೀ ಎತ್ತರಕ್ಕೆ ಹಾರಿತು ಮತ್ತು 30 ರಿಂದ 40 ಸೆಂ.ಮೀ ದೂರದಲ್ಲಿ ಮತ್ತೊಮ್ಮೆ ಸುರಕ್ಷಿತವಾಗಿ ಸಾಫ್ಟ್​ ಲ್ಯಾಂಡ್​ ಆಯಿತು ಎಂದು ಇಸ್ರೋ ಹೇಳಿದೆ. ಅಲ್ಲದೆ, ಎಕ್ಸ್ ನಲ್ಲಿ ವಿಡಿಯೋ ಸಹ ಹಂಚಿಕೊಂಡಿದೆ.

ಪ್ರಸ್ತುತ ಚಂದ್ರಯಾನ 3 ಎಲ್ಲ ಸಿಸ್ಟಮ್​ಗಳು ನಿರ್ವಹಿಸಲ್ಪಡುತ್ತವೆ ಮತ್ತು ಆರೋಗ್ಯಕರವಾಗಿವೆ. ನಿಯೋಜಿತ ರಾಂಪ್, ChaSTE ಮತ್ತು ILSA ಗಳನ್ನು ಹಿಂದಕ್ಕೆ ಮಡಚಲಾಯಿತು ಮತ್ತು ಪ್ರಯೋಗದ ನಂತರ ಯಶಸ್ವಿಯಾಗಿ ಮರುನಿಯೋಜಿಸಲಾಯಿತು ಎಂದು ಇಸ್ರೋ ಎಕ್ಸ್ ನಲ್ಲಿ ತಿಳಿಸಿದೆ.

ಜುಲೈ 14ರಂದು ಚಂದ್ರಯಾನ 3 ಮಿಷನ್‌ ಅನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಆಗಸ್ಟ್​ 23ರ ಸಂಜೆ 6 ಗಂಟೆ 4 ನಿಮಿಷಕ್ಕೆ ವಿಕ್ರಮ ಲ್ಯಾಂಡರ್​ ಮತ್ತು ಪ್ರಗ್ಯಾನ್​ ರೋವರ್​ ಒಳಗೊಂಡಿದ್ದ ಲ್ಯಾಂಡರ್​ ಮಾಡ್ಯೂಲ್​ ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಸಾಫ್ಟ್​ ಲ್ಯಾಂಡಿಂಗ್ ಆಗುವ ಮೂಲಕ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ. ‌

ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶ ಮತ್ತು ಚಂದ್ರನಲ್ಲಿಗೆ ಇಳಿದ ನಾಲ್ಕನೇ ದೇಶ ಎಂಬ ಹೆಗ್ಗಳಿಕೆಯನ್ನು ಚಂದ್ರಯಾನ-3 ಗಳಿಸಿದೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *