ಬಿಯರ್ ನಿಂದ ಓಡುತ್ತೆ ಈ ಬೈಕ್ – ಅಚ್ಚರಿ ಅನಿಸಿದ್ರೂ ಇದು ಸತ್ಯ, ಈ ವರದಿ ಓದಿ…

ಬಿಯರ್ ನಿಂದ ಓಡುತ್ತೆ ಈ ಬೈಕ್ – ಅಚ್ಚರಿ ಅನಿಸಿದ್ರೂ ಇದು ಸತ್ಯ, ಈ ವರದಿ ಓದಿ…

ನ್ಯೂಸ್ ಆ್ಯರೋ‌ : ದುಬಾರಿ ಇಂಧನ ಬೆಲೆಯಿಂದಾಗಿ ವಾಹನ ಓಡಿಸಲು ಹಿಂದೆ ಮುಂದೆ ನೋಡಬೇಕಾಗುತ್ತದೆ ಎಂಬುದು ಬಹುತೇಕರ ಗೋಳು. ಜೊತೆಗೆ ಇಂಧನದ ಕೊರತೆಯೂ ದೊಡ್ಡ ಸಮಸ್ಯೆಯಾಗಿ ಕಾಡುತ್ತದೆ. ಇದಕ್ಕಾಗಿ ಪರ್ಯಾಯ ಮಾರ್ಗಗಳ ಅನ್ವೇಷಣೆಯಲ್ಲಿ ವಿಜ್ಞಾನಿಗಳು ತೊಡಗಿದ್ದಾರೆ. ಇದೀಗ ಅಮೆರಿಕಾದ ವ್ಯಕ್ತಿಯೊಬ್ಬರು ಪೆಟ್ರೋಲ್ ಬದಲು ಬಿಯರ್ ನಿಂದ ಓಡುವ ಬೈಕ್ ಕಂಡು ಹಿಡಿದು ಹೊಸ ಸಾಧ್ಯತೆಯ ಭರವಸೆ ಮೂಡಿಸಿದ್ದಾರೆ.

ಅಮೆರಿಕಾದ ಮೈಕೆಲ್ಸನ್ ಈ ಆವಿಷ್ಕಾರ ನಡೆಸಿದ ವ್ಯಕ್ತಿ. ಬಿಯರ್ ನಿಂದ ಚಲಿಸುವ ಈ ಬೈಕ್ ನ ಗರಿಷ್ಠ ವೇಗ ಗಂಟೆಗೆ 240 ಕಿ.ಮೀ. ಎಂದು ಮೈಕೆಲ್ಸನ್ ತಿಳಿಸಿದ್ದಾರೆ.

ಈ ಬೈಕ್‌ಗೆ ಅನಿಲ ಚಾಲಿತ ಎಂಜಿನ್ ಬದಲು ಹೀಟಿಂಗ್ ಕಾಯಿಲ್ ಅನ್ನು ಬಳಸಲಾಗಿದೆ. ಈ ಕಾಯಿಲ್ ಬಿಯರ್ ಅನ್ನು 300 ಡಿಗ್ರಿಗಳ ವರೆಗೆ ಬಿಸಿ ಮಾಡಿ ಬೈಕ್ ಮುಂದೆ ಚಲಿಸುವಂತೆ ಮಾಡುತ್ತದೆ ಎಂದು ಅವರು ವಿವರಿಸಿದ್ದಾರೆ.

ಮೈಕೆಲ್ಸನ್ ತಯಾರಿಸಿರುವ ಬಿಯರ್ ಚಾಲಿತ ಬೈಕ್ ಇನ್ನೂ ರಸ್ತೆಗೆ ಇಳಿದಿಲ್ಲ. ಆದರೆ ಇದು ಸ್ಥಳೀಯ ಪ್ರದರ್ಶನವೊಂದರಲ್ಲಿ ಮೊದಲ ಸ್ಥಾನವನ್ನು ಗಳಿಸಿದೆ. ಈ ಬೈಕ್‌ನ ಸಾಮರ್ಥ್ಯ ಪರೀಕ್ಷೆಯ ಬಳಿಕ ದೊಡ್ಡ ಮಟ್ಟದಲ್ಲಿ ಪ್ರದರ್ಶನಕ್ಕೆ ಕೊಂಡೊಯ್ಯುವ ಆಶಯವನ್ನು ಮೈಕೆಲ್ಸನ್ ವ್ಯಕ್ತಪಡಿಸಿದ್ದಾರೆ. ಮೈಕೆಲ್ಸನ್ ಈ ಬೈಕ್ ಅನ್ನು ಬ್ಲೂಮಿಂಗ್ಟನ್‌ನಲ್ಲಿರುವ ತನ್ನ ಗ್ಯಾರೇಜ್‌ನಲ್ಲಿ ನಿರ್ಮಿಸಿದ್ದಾರೆ. ”ನಾನು ಮದ್ಯಪಾನ ಮಾಡಲ್ಲ. ಹೀಗಾಗಿ ಬೈಕ್ ಚಲಿಸುವಂತೆ ಮಾಡಲು ಇಂಧನದ ಬದಲು ಬಿಯರ್ ಅನ್ನು ಬಳಸಿದರೆ ಹೇಗೆ ಎಂದು ನಾನು ಯೋಚಿಸಿದ್ದೆ” ಎಂದು ಮೈಕೆಲ್ಸನ್ ಹೇಳಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *