6 ರಿಂದ 10 ಡಿಗ್ರಿಗಳಷ್ಟು ವಾಲುತ್ತಿದೆ ತುಂಗನಾಥ ದೇವಾಲಯ – ವಿಶ್ವದ ಅತಿ ಎತ್ತರದ ಶಿವನ ದೇವಸ್ಥಾನಕ್ಕೆ ಏನಾಯಿತು?

6 ರಿಂದ 10 ಡಿಗ್ರಿಗಳಷ್ಟು ವಾಲುತ್ತಿದೆ ತುಂಗನಾಥ ದೇವಾಲಯ – ವಿಶ್ವದ ಅತಿ ಎತ್ತರದ ಶಿವನ ದೇವಸ್ಥಾನಕ್ಕೆ ಏನಾಯಿತು?

ನ್ಯೂಸ್ ಆ್ಯರೋ‌ : ಡೆಹ್ರಾಡೂನ್‌ನ ರುದ್ರಪ್ರಯಾಗ ಜಿಲ್ಲೆಯಲ್ಲಿರುವ ವಿಶ್ವದ ಅತಿ ಎತ್ತರದ ಶಿವನ ತುಂಗನಾಥ ದೇವಾಲಯವು ವಾಲುತ್ತಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತಿಳಿಸಿದೆ. ಈ ತುಂಗನಾಥ ದೇವಾಲಯವು ಸುಮಾರು 12,800 ಅಡಿ ಎತ್ತರದಲ್ಲಿ ಉತ್ತರಾಭಿಮುಖವಾಗಿ ನೆಲೆಸಿದೆ.

ಸದ್ಯ ಈ ದೇವಾಲಯ 5-6 ಡಿಗ್ರಿಗಳಷ್ಟು ಅಥವಾ ಸಂಕೀರ್ಣದ ಸಣ್ಣ ರಚನೆಗಳಲ್ಲಿ 10 ಡಿಗ್ರಿಗಳಷ್ಟು ವಾಲುತ್ತಿದೆ ಎಂದು ಎಎಸ್‌ಐ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ದೇಗುಲವನ್ನು ಸಂರಕ್ಷಿತ ಸ್ಮಾರಕ ಪಟ್ಟಿಗೆ ಸೇರಿಸಲು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕ ಎಂದು ಘೋಷಿಸುವ ಪ್ರಕ್ರಿಯೆಯನ್ನು ಸರ್ಕಾರ ಪ್ರಾರಂಭಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಕೋರಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತುಂಗನಾಥ ದೇವಸ್ಥಾನ ಕುಸಿಯಬಹುದಾದ ಸಾಧ್ಯತೆಯನ್ನು ಅಧಿಕಾರಿಗಳು ತಳ್ಳಿ ಹಾಕಿಲ್ಲ. ಈ ಬಗ್ಗೆ ಮಾತನಾಡಿರುವ ಎಎಸ್‌ಐನ ಡೆಹ್ರಾಡೂನ್ ಸರ್ಕಲ್‌ನ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ಮನೋಜ್ ಕುಮಾರ್ ಸಕ್ಸೇನಾ, “ಮೊದಲು, ಹಾನಿಯ ಮೂಲ ಕಾರಣವನ್ನು ಕಂಡುಹಿಡಿದು ಅದನ್ನು ತಕ್ಷಣ ಸರಿಪಡಿಸಲು ಸಾಧ್ಯವಾದರೆ ಅದನ್ನು ಮಾಡುತ್ತೇವೆ. ಅಲ್ಲದೆ, ದೇಗುಲವನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ವಿವರವಾದ ಮಾಹಿತಿ ನೀಡುತ್ತೇವೆ” ಎಂದು ಹೇಳಿದ್ದಾರೆ. ಅಗತ್ಯವಿದ್ದರೆ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ನಂತರ ಹಾನಿಗೊಳಗಾದ ಅಡಿಪಾಯವನ್ನು ಬದಲಾಯಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ದೇಗುಲದ ಇತಿಹಾಸ

ಈ ದೇಗುಲವನ್ನು 8ನೇ ಶತಮಾನದಲ್ಲಿ ಕಟ್ಯೂರಿ ಅರಸರು ನಿರ್ಮಿಸಿದರು ಎನ್ನುತ್ತದೆ ಇತಿಹಾಸ. ಈ ದೇವಾಲಯವು ಮಹಾಭಾರತದ ವೀರರಾದ ಪಾಂಡವರಿಗೆ ಸಂಬಂಧಿಸಿದ ದಂತಕಥೆಯನ್ನು ಸಹ ಹೊಂದಿದೆ. ಇಲ್ಲಿನ ಹವಾಮಾನವು ಸಾಮಾನ್ಯವಾಗಿ ವರ್ಷವಿಡೀ ತಂಪಾಗಿರುತ್ತದೆ. ಸರಾಸರಿ ತಾಪಮಾನವು ಹಗಲಿನಲ್ಲಿ ಸುಮಾರು 16 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಭಾರೀ ಹಿಮಪಾತದಿಂದಾಗಿ ಚಳಿಗಾಲದಲ್ಲಿ ತುಂಗನಾಥ ದೇವಾಲಯವು ಸುಮಾರು 6 ತಿಂಗಳ ಕಾಲ ಮುಚ್ಚಿರುತ್ತದೆ. ಅಂದಹಾಗೆ ಈ ದೇವಾಲಯದ ಅರ್ಚಕರು ದಕ್ಷಿಣ ಭಾರತ ಮೂಲದವರಾಗಿದ್ದಾರೆ. ಶತಮಾನದಲ್ಲಿ ಶಂಕರಾಚಾರ್ಯರು ಸ್ಥಾಪಿಸಿದ ಸಂಪ್ರದಾಯ ಇದು ಎನ್ನಲಾಗಿದೆ.

ತುಂಗನಾಥ ದೇವಾಲಯವು ಬದ್ರಿ ಕೇದಾರ್ ದೇವಾಲಯ ಸಮಿತಿ (ಬಿಕೆಟಿಸಿ)ಯ ಆಡಳಿತದಲ್ಲಿದೆ. “ದೇವಾಲಯ ವಾಲಿರುವುದು ಹಾಗೂ ಈ ಕುರಿತು ಸರ್ಕಾರಕ್ಕೆ ನೀಡಿರುವ ಸಲಹೆಗಳ ಕುರಿತಾಗಿ ಬಿಕೆಟಿಸಿಗೆ ಪತ್ರವನ್ನೂ ಕಳುಹಿಸಲಾಗಿದೆ. ಆದರೆ ನಮಗೆ ಇನ್ನೂ ಪ್ರತಿಕ್ರಿಯೆ ಬಂದಿಲ್ಲ” ಎಂದು ಸಕ್ಸೇನಾ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಕೆಟಿಸಿ ಅಧ್ಯಕ್ಷ ಅಜೇಂದ್ರ ಅಜಯ್, “ಈ ವಿಷಯವನ್ನು ಇತ್ತೀಚೆಗೆ ಮಂಡಳಿಯ ಸಭೆಯಲ್ಲಿ ಚರ್ಚಿಸಲಾಗಿದೆ. ಅಲ್ಲಿ ಎಲ್ಲಾ ಮಧ್ಯಸ್ಥಗಾರರು ಪುರಾತತ್ವ ಇಲಾಖೆಯ ಪ್ರತಿಪಾದನೆಯನ್ನು ತಿರಸ್ಕರಿಸಿದ್ದಾರೆ. ದೇವಾಲಯವನ್ನು ಅವರಿಗೆ ಹಸ್ತಾಂತರಿಸದೇ ಅದರ ಮೂಲ ಸ್ವರೂಪ ಮರುಸ್ಥಾಪಿಸಲು ನಾವು ಅವರ ಸಹಾಯವನ್ನು ತೆಗೆದುಕೊಳ್ಳಲು ಸಿದ್ಧರಿದ್ದೇವೆ” ಎಂದಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *