ಕೊರೊನಾಗಿಂತಲೂ ಡೇಂಜರಸ್ ವೈರಸ್ ಈ “ಡಿಸೀಸ್ ಎಕ್ಸ್” – ಐದು ಕೋಟಿ ಜನರ ಸಾವಿನ ಸೂಚನೆ ನೀಡಿದ WHO

ಕೊರೊನಾಗಿಂತಲೂ ಡೇಂಜರಸ್ ವೈರಸ್ ಈ “ಡಿಸೀಸ್ ಎಕ್ಸ್” – ಐದು ಕೋಟಿ ಜನರ ಸಾವಿನ ಸೂಚನೆ ನೀಡಿದ WHO

ನ್ಯೂಸ್ ಆ್ಯರೋ : ಪ್ರಪಂಚದಾದ್ಯಂತ ವಿನಾಶವನ್ನೇ ಉಂಟು ಮಾಡಿದ್ದ ಕೊರೊನಾದ ಭಯ ಇನ್ನೂ ಜನರಲ್ಲಿ ಮನೆ ಮಾಡಿದೆ. ಈಗಲೂ ಅನೇಕ ದೇಶಗಳಲ್ಲಿ ಈ ಸಾಂಕ್ರಾಮಿಕ ರೋಗಕ್ಕೆ ಅನೇಕ ಜನರು ಬಲಿಯಾಗುತ್ತಿದ್ದಾರೆ. ಆದರೆ ಇನ್ನು ಮುಂದೆ ಬರುವ ಸಾಂಕ್ರಾಮಿಕ ಮಹಾ ವಿನಾಶವನ್ನೇ ಉಂಟು ಮಾಡಬಹುದು ಎಂದು ವಿಶ್ವ ಅರೋಗ್ಯ ಸಂಸ್ಥೆ ಎಚ್ಚರಿಸಿದೆ.

ಕೋವಿಡ್ ಸಾಂಕ್ರಾಮಿಕದಿಂದಾಗಿ ವಿಶ್ವದಾದ್ಯಂತ ಸುಮಾರು ಏಳು ಕೋಟಿ ಜನರು ಸಾವನ್ನಪ್ಪಿದ್ದಾರೆ. ಇದೀಗ ಮತ್ತೊಂದು ವೈರಸ್ ಕಾಣಿಸಿಕೊಂಡಿದ್ದು, ಇದು ಕೋವಿಡ್- 19 ಗಿಂತ ಏಳು ಪಟ್ಟು ಹೆಚ್ಚು ಅಪಾಯಕಾರಿ. ಇದನ್ನು ಡಿಸೀಸ್ ಎಕ್ಸ್ ಎಂದು ಹೆಸರಿಸಲಾಗಿದ್ದು, ಇದರಿಂದ ಕನಿಷ್ಠ 5 ಕೋಟಿ ಜನರು ಪ್ರಾಣ ಕಳೆದುಕೊಳ್ಳಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಆತಂಕ ವ್ಯಕ್ತಪಡಿಸಿದೆ.

ಡಿಸೀಸ್ ಎಕ್ಸ್ ಸಾಂಕ್ರಾಮಿಕ ರೂಪವನ್ನು ಪಡೆದರೆ ಕನಿಷ್ಠ 5 ಕೋಟಿ ಜನರು ಸಾಯಬಹುದು. ಇದನ್ನು ನಿಭಾಯಿಸುವುದು ದೊಡ್ಡ ಸವಾಲಾಗಿದೆ. ಇದು ಕೋವಿಡ್ -19 ಗಿಂತ ಹೆಚ್ಚು ಮಾರಕವಾಗಿದೆ ಎಂದು ಬ್ರಿಟನ್‌ನ ಲಸಿಕೆ ಕಾರ್ಯಪಡೆಯ ಮುಖ್ಯಸ್ಥ ಡೇಮ್ ಕೇಟ್ ಬಿಂಗ್‌ಹ್ಯಾಮ್ ಹೇಳಿದ್ದಾರೆ.

1918-19ರಲ್ಲಿ ಸಾಂಕ್ರಾಮಿಕ ರೋಗವಿತ್ತು. ಆ ವೇಳೆಯಲ್ಲಿ ವಿಶ್ವದಾದ್ಯಂತ 5 ಕೋಟಿಗೂ ಹೆಚ್ಚು ಜನರು ಸಾವನ್ನಪ್ಪಿದ್ದರು. ವಿಜ್ಞಾನಿಗಳು ಈಗ ಕಾಣಿಸಿಕೊಂಡಿರುವ ವೈರಸ್ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಕೇಟ್ ಬಿಂಗ್‌ಹ್ಯಾಮ್ ತಿಳಿಸಿದ್ದಾರೆ.

ಹೆಚ್ಚಿನ ವೈರಸ್ ಗಳು ಭೂಮಿಯಲ್ಲಿ ಪುನರಾವರ್ತನೆ ಮತ್ತು ರೂಪಾಂತರವಾಗುತ್ತಿದ್ದು, ಅವೆಲ್ಲವೂ ಅಪಾಯ ಉಂಟು ಮಾಡುವುದಿಲ್ಲ. ಪ್ರಸ್ತುತ ವಿಜ್ಞಾನಿಗಳು 25 ವೈರಸ್ ಕುಟುಂಬಗಳನ್ನು ಅಧ್ಯಯನ ಮಾಡುತ್ತಿದ್ದಾರೆ. ಅವುಗಳಲ್ಲಿ ಯಾವುದಾದರೂ ತೀವ್ರ ಸಾಂಕ್ರಾಮಿಕ ರೋಗವಾಗಿ ರೂಪಾಂತರವಾಗಬಹುದು ಎಂದು ಅವರು ತಿಳಿಸಿದ್ದಾರೆ.

Related post

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಆರೋಗ್ಯ ಪರಿಪೂರ್ಣವಾಗಿರುತ್ತದೆ. ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಕುಟುಂಬದೊಂದಿಗೆ…
ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…

Leave a Reply

Your email address will not be published. Required fields are marked *