ಅಮೆರಿಕನ್ ಬಿಲಿಯನೇರ್ ಸೊರೊಸ್ ಸಾಮ್ರಾಜ್ಯಕ್ಕೆ ಅಧಿಪತಿಯ ನೇಮಕ – ಕೊಡುಗೈ ದಾನಿಯ ಉತ್ತರಾಧಿಕಾರಿ ಯಾರು ‌ಗೊತ್ತಾ?

ಅಮೆರಿಕನ್ ಬಿಲಿಯನೇರ್ ಸೊರೊಸ್ ಸಾಮ್ರಾಜ್ಯಕ್ಕೆ ಅಧಿಪತಿಯ ನೇಮಕ – ಕೊಡುಗೈ ದಾನಿಯ ಉತ್ತರಾಧಿಕಾರಿ ಯಾರು ‌ಗೊತ್ತಾ?

ನ್ಯೂಸ್ ಆ್ಯರೋ‌ : ಹಂಗೇರಿಯನ್ ಅಮೆರಿಕನ್ ಹೂಡಿಕೆದಾರ, ಉದ್ಯಮಿ ಜಾರ್ಜ್ ಸೊರೊಸ್ ತಮ್ಮ ಉತ್ತರಾಧಿಕಾರಿಯಾಗಿ ಪುತ್ರ 37ರ ಹರೆಯದ ಅಲೆಕ್ಸ್ ಅವರನ್ನು ಆರಿಸಿದ್ದಾರೆ. ಸೊರೊಸ್ ಫಂಡ್ ಮ್ಯಾನೇಜ್‍ಮೆಂಟ್ ಮತ್ತು ಓಪನ್ ಸೊಸೈಟಿ ಫೌಂಡೇಷನ್ ಸ್ಥಾಪಕ ತಮ್ಮ ಪುತ್ರನಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.

92 ವರ್ಷದ ಸೊರೊಸ್ ಅವರ ಐವರು ಮಕ್ಕಳ ಪೈಕಿ ಅಲೆಕ್ಸ್ ಎರಡನೆಯವರು. ಪದವೀಧರರಾಗಿರುವ ಅಲೆಕ್ಸ್ ತಮ್ಮ ತಂದೆಯ ಉದಾರ ಗುಣಗಳನ್ನು ಅಳವಡಿಸಿಕೊಳ್ಳುವುದಾಗಿ ಈ ಸಂದರ್ಭದಲ್ಲಿ ಹೇಳಿದರು. ಕುಟುಂಬದಿಂದ ಹಣ ದಾನ ಮಾಡುವುದನ್ನು ಮುಂದುವರಿಸುವುದಾಗಿ ಭರವಸೆ ನೀಡಿದರು.

ಯಾರು ಈ ಜಾರ್ಜ್ ಸೊರೊಸ್?

ಅಮೆರಿಕದ ಡೆಮಾಕ್ರಟಿಕ್ ಪಕ್ಷದ ಅತಿ ದೊಡ್ಡ ದಾನಿಗಳಲ್ಲಿ ಈ ಜಾರ್ಜ್ ಸೊರೊಸ್ ಒಬ್ಬರು. ಹಂಗೇರಿಯ ಬುಡಾಪೆಸ್ಟ್ ನಲ್ಲಿ 1930ರಲ್ಲಿ ಜನಿಸಿದ ಇವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ನಲ್ಲಿ ವ್ಯಾಸಂಗ ಮಾಡಿದ್ದರು.

ಕೊಡುಗೈ ದಾನಿ

ಫೋರ್ಬ್ಸ್ ಸೊರೊಸ್ ಅವರನ್ನು ಅತ್ಯಂತ ಉದಾರ ದಾನಿ ಎಂದು ಕರೆದಿದೆ. ಅವರು ತಮ್ಮ ಆದಾಯದ 32 ಶತಕೋಟಿ ಡಾಲರ್ ಗಿಂತ ಅಧಿಕ ಹಣವನ್ನು ಓಪನ್ ಸೊಸೈಟಿ ಫೌಂಡೇಷನ್ ಗಳಿಗೆ ದಾನ ಮಾಡುವುದಾಗಿ ಘೋಷಿಸಿದ್ದು, ಈಗಾಗಲೇ 15 ಶತಕೋಟಿ ಡಾಲರ್ ವಿತರಿಸಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *