ಇಸ್ರೇಲ್ ವಿರುದ್ಧ ಅಧಿಕೃತ ಯುದ್ಧ ಸಾರಿದ ಮುಸ್ಲಿಂ ರಾಷ್ಟ್ರ ಯೆಮೆನ್ – ಯುದ್ಧ ಘೋಷಣೆ ಬೆನ್ನಲ್ಲೇ ಇಸ್ರೇಲ್ ನತ್ತ ತೂರಿಬಂದ ಮಿಸೈಲ್ ಗಳು..‌!

ಇಸ್ರೇಲ್ ವಿರುದ್ಧ ಅಧಿಕೃತ ಯುದ್ಧ ಸಾರಿದ ಮುಸ್ಲಿಂ ರಾಷ್ಟ್ರ ಯೆಮೆನ್ – ಯುದ್ಧ ಘೋಷಣೆ ಬೆನ್ನಲ್ಲೇ ಇಸ್ರೇಲ್ ನತ್ತ ತೂರಿಬಂದ ಮಿಸೈಲ್ ಗಳು..‌!

ನ್ಯೂಸ್ ಆ್ಯರೋ : ಒಂದು ಕಡೆ ಹಮಾಸ್ ಉಗ್ರರು ಇಸ್ರೇಲ್ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ IDF ದಾಳಿ ನಡೆಸುತ್ತಿದ್ದು ಹಮಾಸ್ ಉಗ್ರರ ಸರ್ವನಾಶಕ್ಕೆ ಪಣತೊಟ್ಟಿದೆ. ಇತ್ತ ಪ್ಯಾಲೆಸ್ತಿನಿಯರ ಮೇಲಿನ ದಾಳಿಗೆ ಮುಸ್ಲಿಂ ರಾಷ್ಟ್ರಗಳು ಕೆರಳಿ ಕೆಂಡಾಮಂಡಲವಾಗಿದ್ದು, ದಾಳಿ ನಿಲ್ಲಿಸುವ ಎಚ್ಚರಿಕೆ ಮೀರಿದ ಇಸ್ರೇಲ್ ವಿರುದ್ಧ ಇದೀಗ ಯೆಮೆನ್ ಅಧಿಕೃತವಾಗಿ ಯುದ್ಧ ಘೋಷಿಸಿದೆ.

ಯೆಮೆನ್ ಭದ್ರತಾ ಪಡೆ ಮುಖ್ಯಸ್ಥ ಯುದ್ಧ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇಸ್ರೇಲ್ ಮೇಲೆ ಮಿಸೈಲ್‌ಗಳು ತೂರಿ ಬಂದಿದೆ. ಯೆಮನ್ ಯುದ್ಧ ಘೋಷಣೆ ಕುರಿತು ಭದ್ರತಾ ಪಡೆ ವಕ್ತಾರ ಯಹ್ಯಾ ಸೆರಿ ವಿಡಿಯೋ ಮೂಲಕ ಘೋಷಣೆ ಮಾಡಿದ್ದಾರೆ. ಯುದ್ಧ ಘೋಷಣೆ ಬೆನ್ನಲ್ಲೇ ಬ್ಯಾಲಿಸ್ಟಿಕ್ ಮಿಸೈಲ್ ದಾಳಿ ಆರಂಭಗೊಂಡಿದೆ.

ಇಸ್ರೇಲ್ ಮೇಲೆ ಹಮಾಸ್ ಉಗ್ರರು, ಇತ್ತ ಹಿಜ್‌ಬುಲ್ಲಾ ಉಗ್ರರು ಜೊತೆಗೆ ಇದೀಗ ಯೆಮೆನ್ ಸೇನೆ ಕೂಡ ದಾಳಿ ಆರಂಭಿಸಿದೆ. ಇಸ್ರೇಲ್ ಏಕಾಂಗಿ ಹೋರಾಟ ನಡೆಸುತ್ತಿದ್ದು, ಹಮಾಸ್ ಉಗ್ರರ ವಶದಲ್ಲಿರುವ ತನ್ನ ನಾಗರೀಕರನ್ನು ಬಿಡಿಸಿಕೊಂಡು ಬರಲು ಇಸ್ರೇಲ್ ಹರಸಾಹಸ ಪಡುತ್ತಿದೆ.

ಪ್ಯಾಲೆಸ್ತಿನ್ ಸಹೋದರ, ಸಹೋದರಿಯರಿಗೆ ನಾವು ಹೋರಾಟ ಆರಂಭಿಸಿದ್ದೇವೆ ಎಂದು ಯೆಮೆನ್ ಹೇಳಿಕೊಂಡಿದೆ. ಇಸ್ರೇಲ್ ದಾಳಿ ನಿಲ್ಲಿಸುವವರೆಗೆ ಯೆಮೆನ್ ಶಸಸ್ತ್ರ ಪಡೆಗಳು ಭೀಕರ ದಾಳಿ ನಡೆಸಲಿದೆ. ಇಸ್ರೇಲ್ ಘೋರ ಪರಿಣಾಮ ಎದುರಿಸಬೇಕಾಗಲಿದೆ ಎಂದು ಯೆಮೆನ್ ಎಚ್ಚರಿಸಿದೆ. ಆದರೆ ಯೆಮೆನ್ ಸೇರಿದಂತೆ ಇಸ್ರೇಲ್ ಸುತ್ತಲಿನ ಅರಬ್ ರಾಷ್ಟ್ರಗಳ ದಾಳಿಯನ್ನು ನಿರೀಕ್ಷಿಸಿದ್ದ ಇಸ್ರೇಲ್ ಎಲ್ಲಾ ತಯಾರಿ ಮಾಡಿಕೊಂಡಿದೆ.

ಅಮೆರಿಕ ಎಚ್ಚರಿಕೆಯನ್ನು ಮೀರಿ ಯೆಮೆನ್ ಯುದ್ಧಕ್ಕೆ ಧುಮಿಕಿದೆ. ಇದೀಗ ಅಮೆರಿಕ ತನ್ನ ಪ್ರಾಬಲ್ಯವನ್ನು ತೋರಿಸುವುದರಲ್ಲಿ ಸಂದೇಹವಿಲ್ಲ. ಅಮೆರಿಕ ನೆರವಿನಿಂದ ಇಸ್ರೇಲ್ ಗಾಜಾ ಮೇಲೆ ಯುದ್ಧ ಮಾಡುತ್ತಿದೆ. ಇದೀಗ ಅರಬ್ ರಾಷ್ಟ್ರಗಳು ಒಂದೊಂದಾಗಿ ಇಸ್ರೇಲ್ ವಿರುದ್ಧ ಮುಗಿಬೀಳಲು ಆರಂಭಿಸಿದೆ.

ಇಸ್ರೇಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಟ್ಜಾಚಿ ಹನೆಗ್ಬಿ, ಹೌತಿ ದಾಳಿಗಳು ಅಸಹನೀಯ ಎಂದು ಹೇಳಿದರು, ಆದರೆ ಇಸ್ರೇಲ್ ಹೌತಿಗಳ ದಾಳಿಗೆ ಹೇಗೆ ಪ್ರತಿಕ್ರಿಯಿಸಬಹುದು ಎಂದು ಕೇಳಿದಾಗ ವಿವರಿಸಲು ಅವರು ನಿರಾಕರಿಸಿದರು.

ಅಂದಹಾಗೆ ‘ಅಮೆರಿಕಕ್ಕೆ ಸಾವು, ಇಸ್ರೇಲ್‌ಗೆ ಸಾವು, ಯಹೂದಿಗಳಿಗೆ ಶಾಪ ಮತ್ತು ಇಸ್ಲಾಂಗೆ ಜಯ’ ಎಂಬುದು ಹೌತಿಗಳ ಘೋಷಣೆಯಾಗಿದೆ. ಹೌತಿಗಳು ‘ಆಕ್ಸಿಸ್ ಆಫ್ ರೆಸಿಸ್ಟೆನ್ಸ್’ನ ಭಾಗವಾಗಿದ್ದು, ಇದು ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಅನ್ನು ತೀವ್ರವಾಗಿ ವಿರೋಧಿಸುತ್ತದೆ ಮತ್ತು ಅಕ್ಟೋಬರ್ 7 ರಿಂದ ಇಸ್ರೇಲ್​ ಪ್ರದೇಶದಾದ್ಯಂತ ದಾಳಿಗಳನ್ನು ನಡೆಸುತ್ತಿದೆ.

ಯೆಮೆನ್ ಯುದ್ಧದ ಸಮಯದಲ್ಲಿ ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಮೇಲಿನ ದಾಳಿಯಲ್ಲಿ ಹೌತಿಗಳು ತಮ್ಮ ಕ್ಷಿಪಣಿ ಮತ್ತು ಡ್ರೋನ್ ಸಾಮರ್ಥ್ಯಗಳನ್ನು ಪ್ರದರ್ಶಿಸಿದ್ದರು. ಇರಾನ್, ಹೌತಿಗಳಿಗೆ ಶಸ್ತ್ರಾಸ್ತ್ರ ಪೂರೈಕೆ, ತರಬೇತಿ ಮತ್ತು ಧನಸಹಾಯ ನೀಡುತ್ತಿದೆ ಎಂದು ಸೌದಿ ನೇತೃತ್ವದ ಒಕ್ಕೂಟವು ಆರೋಪಿಸಿದೆ. ಆದರೆ, ಹೌತಿಗಳು ತಾವು ಇರಾನಿನ ಪ್ರಾಕ್ಸಿ ಎಂಬುದನ್ನು ನಿರಾಕರಿಸಿದ್ದು, ತನ್ನದೇ ಆದ ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುತ್ತೇವೆ ಎಂದು ಹೇಳಿದೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *