ಬೀದಿಗೆ ಬಿತ್ತು‌ ಪಾಪಿ ಪಾಕಿಸ್ತಾನ – ಒಂದು ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ‌ ಕೇಳಿದ್ರೆ ತಲೆ ತಿರುಗೋದು ಗ್ಯಾರಂಟಿ..!

ಬೀದಿಗೆ ಬಿತ್ತು‌ ಪಾಪಿ ಪಾಕಿಸ್ತಾನ – ಒಂದು ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ‌ ಕೇಳಿದ್ರೆ ತಲೆ ತಿರುಗೋದು ಗ್ಯಾರಂಟಿ..!

ನ್ಯೂಸ್ ಆ್ಯರೋ : ಪಾಪಿ ಪಾಕಿಸ್ತಾನದ ಪಾಪದ ಕೊಡ ತುಂಬಿದಂತಿದೆ. ಆ ಕಾರಣಕ್ಕಾಗಿಯೇ ದಿನದಿಂದ ದಿನಕ್ಕೆ ಪಾಕಿಸ್ತಾನ ಆರ್ಥಿಕವಾಗಿ ದಿವಾಳಿಯಾಗುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಪಾಕಿಸ್ತಾನದ ಜನರಿಗೆ ಇದೀಗ ಅಲ್ಲಿನ ಸರ್ಕಾರ ಮತ್ತೊಂದು ಶಾಕ್ ನೀಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರ‌‌ ದಿಢೀರ್ ಏರಿಕೆಯಾಗಿದೆ. ಪಾಕಿಸ್ತಾನದಲ್ಲಿನ ಪೆಟ್ರೋಲ್, ಡೀಸೆಲ್ ಬೆಲೆ ಕೇಳಿದ್ರೆ ನಿಮಗೆ ತಲೆ ತಿರುಗೋದು ಮಾತ್ರ ಗ್ಯಾರಂಟಿ.

ಪಾಕಿಸ್ತಾನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?

ಇದೀಗ, ಹೊರಬಿದ್ದಿರುವ ಮಾಹಿತಿಯ ಪ್ರಕಾರ ಪಾಕಿಸ್ತಾನಿ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಗೆ 19.90 ಪೈಸೆ ಹಾಗೂ ಡೀಸೆಲ್ ಗೆ 19.95 ಪೈಸೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಆಗಸ್ಟ್ ತಿಂಗಳಿನಿಂದ ಈ ಬೆಲೆ ಜಾರಿಯಾಗಲಿದ್ದು, ಇದರನ್ವಯ ಅಲ್ಲಿ ಪ್ರತಿ‌ ಲೀಟರ್ ಪೆಟ್ರೋಲ್ ದರ 272 ರೂ ಹಾಗೂ ಡೀಸೆಲ್ ದರ 273 ರೂ ಆಗಿದೆ. ತೈಲೋತ್ಪನ್ನಗಳ ಈ ದಿಢೀರ್ ಬೆಲೆ ಏರಿಕೆಯಿಂದ ಪಾಕಿಸ್ತಾನದ ಜನಸಾಮಾನ್ಯರ ಕಂಗೆಟ್ಟು ಕುಳಿತಿದ್ದಾರೆ.

ಬೆಲೆ ಏರಿಕೆಗೆ ಕಾರಣವೇನು?

ಪಾಕಿಸ್ತಾನ ಸದ್ಯ, ಆರ್ಥಿಕತೆಯಲ್ಲಿ ತೀರಾ ಹಿಂದುಳಿದು ಬಿಟ್ಟಿದೆ. ಆರ್ಥಿಕ ತಜ್ಞರ ಪ್ರಕಾರ ಪಾಕಿಸ್ತಾನವು ಶ್ರೀಲಂಕಾದ ರೀತಿಯೇ ದಿವಾಳಿಯಾಗುವ ಸಾಧ್ಯತೆ‌ ಇದೆ. ಇದರಿಂದ ವಿಚಲಿತಗೊಂಡಿರುವ ಪಾಕ್ ಸರ್ಕಾರ ದಿವಾಳಿತನದಿಂದ ಪಾರಾಗಲು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು ಮುಂದಾಗಿದೆ. ಆದರೆ ಹಿಂದಿನ ಸಾಲ ಬಾಕಿ ಇರುವ ಕಾರಣ ಪಾಕ್ ಸರ್ಕಾರಕ್ಕೆ ಸಾಲ ದೊರೆಯುತ್ತಿಲ್ಲ. ಆದ್ದರಿಂದ ದಿನ ನಿತ್ಯದ ವಸ್ತುಗಳ ಮೇಲೆ ಸರ್ಕಾರ ತೆರಿಗೆ ಹೆಚ್ಚಿಸುತ್ತಿದೆ. ಇದೀಗ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕೂಡ ಹೆಚ್ಚಿಸಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *