ಪಪುವಾ ನ್ಯೂಗಿನಿಯಾದಲ್ಲಿ ಮೋದಿ – ಕಾಲು ಮುಟ್ಟಿ ನಮಸ್ಕರಿಸಿದ ಪ್ರಧಾನಿ ಜೇಮ್ಸ್ ಮರಾಪೆ..!!

ಪಪುವಾ ನ್ಯೂಗಿನಿಯಾದಲ್ಲಿ ಮೋದಿ – ಕಾಲು ಮುಟ್ಟಿ ನಮಸ್ಕರಿಸಿದ ಪ್ರಧಾನಿ ಜೇಮ್ಸ್ ಮರಾಪೆ..!!

ನ್ಯೂಸ್ ಆ್ಯರೋ‌ : ಜಪಾನ್‌ನ ಹಿರೋಷಿಮಾದಲ್ಲಿ ನಡೆದ ಗ್ರೂಪ್ ಆಫ್ ಸೆವೆನ್(ಜಿ 7) ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮೂರು ರಾಷ್ಟ್ರಗಳ ಪ್ರವಾಸದ ಭಾಗವಾಗಿ ಪಪುವಾ ನ್ಯೂಗಿನಿಯಾಗೆ ಭೇಟಿ ನೀಡಿದ್ದಾರೆ. ಪೋರ್ಟ್ ಮೊರೆಸ್ಬಿಗೆ ಆಗಮಿಸಿದ ಮೋದಿ ಅವರನ್ನು ಪಪುವಾ ನ್ಯೂಗಿನಿಯಾ ಪ್ರಧಾನಿ ಜೇಮ್ಸ್ ಮರಾಪೆ ಆತ್ಮೀಯವಾಗಿ ಸ್ವಾಗತಿಸಿದರು. ಆ ವೇಳೆ ಅವರು ಮೋದಿ ಅವರ ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆದರು.

ಬೆನ್ನು ತಟ್ಟಿದ ಮೋದಿ

ಜೇಮ್ಸ್ ಮರಾಪೆ ಕಾಲಿಗೆ ಬೀಳುತ್ತಿದ್ದಂತೆ ತಡೆದ ಮೋದಿ ಈ ರೀತಿ ಮಾಡಬೇಡಿ ಎಂದು ಸೂಚಿಸಿದರಾದರೂ ಅವರು ಕಾಲು ಮುಟ್ಟಿ ನಮಸ್ಕರಿಸಿದ್ದಾರೆ. ಬಳಿಕ ಮೋದಿ ಮರಾಪೆ ಅವರ ಬೆನ್ನು ತಟ್ಟಿದರಲ್ಲದೆ ಪರಸ್ಪರ ನಗುತ್ತಾ ಅಪ್ಪುಗೆ ವಿನಿಮಯ ಮಾಡಿಕೊಂಡರು. ನಂತರ ಮರಪೆ ಮೋದಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಪರಿಚಯಿಸಿದರು.

ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಪಪುವಾ ನ್ಯೂಗಿನಿಯಾಗೆ ಭೇಟಿ ನೀಡಿದ್ದಾರೆ. ಅಲ್ಲಿನ ಭಾರತೀಯ ವಲಸಿಗರೂ ಮೋದಿ ಅವರಿಗೆ ಆತ್ಮೀಯ ಸ್ವಾಗತ ನೀಡಿ ಸೆಲ್ಫಿ ತೆಗೆದುಕೊಂಡರು.

ಸೂರ್ಯಾಸ್ತದ ನಂತರ ಬರುವ ವಿಶ್ವದ ಯಾವುದೇ ನಾಯಕರಿಗೆ ಪಪುವಾ ನ್ಯೂ ಗಿನಿಯಾ ಸಾಮಾನ್ಯವಾಗಿ ಸ್ವಾಗತವನ್ನು ನೀಡುವುದಿಲ್ಲ. ಆದರೆ ಮೋದಿ ಅವರಿಗೆ ವಿಶೇಷ ವಿನಾಯಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೋದಿ ಟ್ವೀಟ್ ನಲ್ಲಿ ಏನಿದೆ?

ಈ ಬಗ್ಗೆ ಟ್ವೀಟ್ ಮಾಡಿದ ಮೋದಿ, “ಪಪುವಾ ನ್ಯೂ ಗಿನಿಯಾ ತಲುಪಿದ್ದೇನೆ. ವಿಮಾನ ನಿಲ್ದಾಣಕ್ಕೆ ಬಂದು ನನ್ನನ್ನು ಸ್ವಾಗತಿಸಿದ್ದಕ್ಕಾಗಿ ಪ್ರಧಾನಿ ಜೇಮ್ಸ್ ಮರಪೆ ಅವರಿಗೆ ಕೃತಜ್ಞನಾಗಿದ್ದೇನೆ. ಇದನ್ನು ನಾನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ. ನನ್ನ ಭೇಟಿಯ ಸಮಯದಲ್ಲಿ ಈ ಮಹಾನ್ ರಾಷ್ಟ್ರದೊಂದಿಗೆ ಭಾರತದ ಸಂಬಂಧವನ್ನು ಹೆಚ್ಚಿಸಲು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *