ಭಾರತದಿಂದ ಕಲಿಯುವುದು ಸಾಕಷ್ಟಿದೆ ಎಂದ ರಷ್ಯಾ ಅಧ್ಯಕ್ಷ ಪುಟಿನ್ – ಪ್ರಧಾನಿ ಮೋದಿ ಕಾರ್ಯ ವೈಖರಿಗೂ ಮೆಚ್ಚುಗೆ

ಭಾರತದಿಂದ ಕಲಿಯುವುದು ಸಾಕಷ್ಟಿದೆ ಎಂದ ರಷ್ಯಾ ಅಧ್ಯಕ್ಷ ಪುಟಿನ್ – ಪ್ರಧಾನಿ ಮೋದಿ ಕಾರ್ಯ ವೈಖರಿಗೂ ಮೆಚ್ಚುಗೆ

ನ್ಯೂಸ್ ಆ್ಯರೋ‌ : ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮೇಕ್ ಇಂಡಿಯಾ ಯೋಜನೆಯನ್ನು ಶ್ಲಾಘಿಸಿದ್ದಾರೆ. ದೇಶೀಯವಾಗಿ ತಯಾರಿಸಿದ ಉತ್ಪನ್ನಗಳ ಮಹತ್ವವನ್ನು ಮೋದಿ ಒತ್ತಿ ಹೇಳಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ ಭಾರತ ಸಕರಾತ್ಮಕ ನೀತಿಗಳನ್ನು ಅಳವಡಿಸಿಕೊಳ್ಳುತ್ತಿದೆ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ ಎಂದು ಪುಟಿನ್ ಹೇಳಿದ್ದಾರೆ.

ಪುಟಿನ್ ಹೇಳಿದ್ದೇನು?

8ನೇ ಈಸ್ಟರ್ನ್ ಎಕಾನಮಿಕ್ ಫಾರಂ(EEF)ನಲ್ಲಿ ಮಾತನಾಡಿದ ಅವರು, ಈ ಹಿಂದೆ ನಾವು ದೇಶೀಯವಾಗಿ ತಯಾರಿಸಿದ ಕಾರು ಹೊಂದಿರಲಿಲ್ಲ. ಆದರೆ ಈಗ ತಯಾರಿಸುತ್ತಿದ್ದೇವೆ. ನಾವು ಕೆಲವೊಂದು ವಿಚಾರದಲ್ಲಿ ನಮ್ಮ ಪಾಲುದಾರ ದೇಶಗಳ ನೀತಿಯನ್ನು ಅನುಸರಿಸಬೇಕು. ಉದಾಹರಣೆಗೆ ಭಾರತ. ಭಾರತ ಇದೀಗ ದೇಶೀಯ ನಿರ್ಮಿತ ವಸ್ತುಗಳ ಮೇಲೆ ಗಮನ ಕೇಂದ್ರೀಕರಿಸಿದೆ. ಮೇಕ್ ಇಂಡಿಯಾ ಯೋಜನೆಯನ್ನು ಪ್ರೋತ್ಸಾಹಿಸಲು ಮೋದಿ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಪುಟಿನ್ ಮೆಚ್ಚುಗೆ ಸೂಚಿಸಿದ್ದಾರೆ.

ನಮ್ಮಲ್ಲಿ ದೇಶೀಯವಾಗಿ ತಯಾರಾದ ವಾಹನಗಳಿವೆ. ಅವು ಕಾರ್ಯಕ್ಷಮತೆಯಲ್ಲಿ ಉತ್ತಮವಾಗಿದ್ದು, ಅವನ್ನು ಹೆಚ್ಚಾಗಿ ಬಳಸಬೇಕು. ಇದು ಡಬ್ಲ್ಯುಟಿಒ ಒಪ್ಪಂದದ ಉಲ್ಲಂಘನೆಯಾಗುವುದಿಲ್ಲ. ಅಧಿಕಾರಿಗಳು ದೇಶೀಯ ನಿರ್ಮಿತ ವಾಹನ ಉಪಯೋಗಿಸುವಂತಾಗಬೇಕು ಎಂದು ಅಬಿಪ್ರಾಯಪಟ್ಟರು.

ಇತ್ತೀಚೆಗೆ ದಿಲ್ಲಿಯಲ್ಲಿ ಮುಕ್ತಾಯಗೊಂಡ ಜಿ-20 ಶೃಂಗಸಭೆಯಲ್ಲಿ ನಿರ್ಣಯವಾದ ಭಾರತ-ಮಧ್ಯಪ್ರಾಚ್ಯ-ಯುರೋಪ್ ಎಕಾನಾಮಿಕ್ ಕಾರಿಡಾರ್ (IMEC) ಬಗ್ಗೆಯೂ ಮಾತನಾಡಿದ ಪುಟಿನ್, ಇದರಿಂದ ರಷ್ಯಾಕ್ಕೆ ಯಾವ ರೀತಿಯಿಂದಲೂ ತೊಂದರೆ ಇಲ್ಲ ಎಂದು ಪ್ರತಿಪಾದಿಸಿದರು.

ನನ್ನ ಪ್ರಕಾರ ಈ ಒಪ್ಪಂದಿಂದ ನಮ್ಮ ದೇಶಕ್ಕೆ ಅನುಕೂಲವೇ ಆಗಲಿದೆ. ಇದು ಲಾಜಿಸ್ಟಿಕ್ ಅಭಿವೃದ್ದಿಪಡಿಸಲು ನೆರವಾಗಲಿದೆ. ಈ ಯೋಜನೆಗಾಗಿ ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಿದೆ ಎಂದು ಪುಟಿನ್ ತಿಳಿಸಿದ್ದಾರೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *