UNESCO World Heritage List : ಬೇಲೂರು, ಹಳೇಬೀಡು, ಸೋಮನಾಥಪುರ ದೇಗುಲಗಳಿಗೆ ವಿಶ್ವ ಸಂಸ್ಥೆ ಮಾನ್ಯತೆ

UNESCO World Heritage List : ಬೇಲೂರು, ಹಳೇಬೀಡು, ಸೋಮನಾಥಪುರ ದೇಗುಲಗಳಿಗೆ ವಿಶ್ವ ಸಂಸ್ಥೆ ಮಾನ್ಯತೆ

ನ್ಯೂಸ್ ಆ್ಯರೋ : ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣಗಳಾದ ಬೇಲೂರು, ಹಳೇಬೀಡು ಮತ್ತು ಮೈಸೂರಿನ ಸೋಮನಾಥಪುರ ದೇವಾಲಯಗಳು ವಿಶ್ವಸಂಸ್ಥೆಯ ಯುನೆಸ್ಕೋ ಪಾರಂಪರಿಕ ಪಟ್ಟಿಗೆ ಸೇರಿವೆ. ಈ ದೇಗುಲಗಳಿಗೆ ವಿಶ್ವಸಂಸ್ಥೆ ಜಾಗತಿಕ ಹಿರಿಮೆ ನೀಡಿದೆ.

ಸೌದಿ ಅರೇಬಿಯಾ ದಲ್ಲಿ ನಡೆದ 45ನೇ ವಿಶ್ವ ಪಾರಂಪರಿಕ ಸಮಿತಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 16ರಿಂದ ಸಭೆ ಆರಂಭವಾಗಿದ್ದು, ರವೀಂದ್ರನಾಥ ಠಾಗೋರ್ ಅವರು ಆರಂಭಿಸಿದ ಶಾಂತಿನಿಕೇತನವನ್ನು ಭಾನುವಾರವಷ್ಟೇ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾಗಿತ್ತು. ಇದೀಗ ಕರ್ನಾಟಕದ ಹೆಮ್ಮೆಯಾಗಿರುವ ಹೊಯ್ಸಳ ದೇಗುಲಗಳು ವಿಶ್ವ ಪಾರಂಪರಿಕ ಪಟ್ಟಿಯನ್ನು ಸೇರಿವೆ.

ಭಾರತಕ್ಕೆ ಮತ್ತಷ್ಟು ಹೆಮ್ಮೆ ತರುವ ಹೊಯ್ಸಳರ ಭವ್ಯ ಮತ್ತು ಪವಿತ್ರ ಶಿಲ್ಪ ಸಂಕೀರ್ಣಗಳನ್ನು UNESCO ವಿಶ್ವ ಪಾರಂಪರಿಕ ಸ್ಥಳಗಳ ಪಟ್ಟಿಯಲ್ಲಿ ಸೇರಿಸಲಾಗಿದ್ದು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಯಾಗಿರುವುದರಿಂದ ವಿದೇಶಗಳ ಪ್ರವಾಸಿಗರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಅಲ್ಲದೇ, ಸ್ಥಳಗಳ ಅಭಿವೃದ್ಧಿಗೆ ವಿಶ್ವ ಪಾರಂಪರಿಕ ನಿಧಿಯಿಂದ ನೆರವು ದೊರೆಯುತ್ತದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

2014ರಲ್ಲಿ ಆಯ್ಕೆ ಪಟ್ಟಿಗೆ ಈ ದೇಗುಲಗಳನ್ನು ಸೇರ್ಪಡೆಗೊಳಿಸಲಾಗಿತ್ತು. 2018ರಲ್ಲಿ ಭಾರತೀಯ ಪುರಾತತ್ವ ಇಲಾಖೆಗೆ (ಎಎಸ್‌ಐ)ಗೆ ರಾಜ್ಯ ಸರ್ಕಾರವು ಈ ದೇಗುಲಗಳ ಸವಿಸ್ತಾರ ಮಾಹಿತಿ ನೀಡಿತ್ತು. 2022ರಲ್ಲಿ ಅಂತರಾಷ್ಟ್ರೀಯ ಪುರಾತನ ಸ್ಮಾರಕ ಮತ್ತು ಪ್ರದೇಶಗಳ ಸಮಿತಿಯು ಇಲ್ಲಿಗೆ ಭೇಟಿ ನೀಡಿದ್ದು, ಈ ದೇಗುಲಗಳ ಬಗ್ಗೆ ಯೂನೆಸ್ಕೊಗೆ ವರದಿ ನೀಡಿತ್ತು.

ಯೂನೆಸ್ಕೊದ ಸರ್ವ ಸದಸ್ಯರ ಸಭೆಯಲ್ಲಿ ಭಾರತವೂ ಸೇರಿದಂತೆ 21 ದೇಶಗಳು ಈ ಮೂರು ದೇಗುಲಗಳನ್ನು ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಸೇರ್ಪಡೆ ಮಾಡಲು ಸರ್ವಾನುಮತದ ಒಪ್ಪಿಗೆ ನೀಡಿದ್ದವು. ಈಗಾಗಲೇ ರಾಜ್ಯದ ಪಶ್ಚಿಮಘಟ್ಟ ಪ್ರದೇಶ, ಹಂಪೆ, ಪಟ್ಟದಕಲ್ಲು ಯುನೆಸ್ಕೊದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *