ಮಕ್ಕಳನ್ನು ನೋಡಿಕೊಳ್ಳಲು ಅಜ್ಜಿ ಬೇಕಾಗಿದ್ದಾರೆ – 80 ಲಕ್ಷ ವೇತನದ ಆಫರ್‌ ಕೊಟ್ಟ ಖ್ಯಾತ ಉದ್ಯಮಿ ವಿವೇಕ್

ಮಕ್ಕಳನ್ನು ನೋಡಿಕೊಳ್ಳಲು ಅಜ್ಜಿ ಬೇಕಾಗಿದ್ದಾರೆ – 80 ಲಕ್ಷ ವೇತನದ ಆಫರ್‌ ಕೊಟ್ಟ ಖ್ಯಾತ ಉದ್ಯಮಿ ವಿವೇಕ್

ನ್ಯೂಸ್‌ ಆ್ಯರೋ : ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಖ್ಯಾತ ಉದ್ಯಮಿ ವಿವೇಕ್‌ ರಾಮಸ್ವಾಮಿ ಅವರು ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಅಜ್ಜಿ ಬೇಕಾಗಿದ್ದಾರೆಂದು ಜಾಹೀರಾತು ನೀಡಿದ್ದಾರೆ.

ಅದಲ್ಲದೆ ಈ ಕೆಲಸಕ್ಕೆ ನೇಮಕವಾಗುವ ಮಹಿಳೆಗೆ ₹80 ಲಕ್ಷ ವಾರ್ಷಿಕ ಸಂಬಳ ನೀಡಲಾಗುತ್ತದೆ ಎಂದು ಇರಾದೆ ವ್ಯಕ್ತಪಡಿಸಿದ್ದಾರೆ.

ಅಮೆರಿಕದ ಪ್ರಬಲ ರಾಜಕಾರಣಿ ವಿವೇಕ್ ರಾಮಸ್ವಾಮಿ

ರಿಪಬ್ಲಿಕ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ವಿವೇಕ್ ರಾಮಸ್ವಾಮಿ ಅವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಅಮೆರಿಕದಲ್ಲಿ ಪ್ರಬಲ ರಾಜಕಾರಣಿಯೂ ಹೌದು. ಅಧ್ಯಕ್ಷೀಯ ಚುನಾವಣೆಯ ಸಂವಾದಗಳಿಗೆ ಅವರು ಅರ್ಹತೆ ಪಡೆದಿರುವುದರಿಂದ ಅವರು ಇತ್ತೀಚಿಗೆ ರಾಜಕೀಯದಲ್ಲಿ ಹೆಚ್ಚು ಕ್ರಿಯಾಶೀಲರಾಗಿದ್ದಾರೆ.

ಈ ನಿಟ್ಟಿನಲ್ಲಿ ಅವರು ತಮ್ಮ ಇಬ್ಬರು ಗಂಡು ಮಕ್ಕಳನ್ನು ನೋಡಿಕೊಳ್ಳಲು ಒಬ್ಬರು ಮಹಿಳೆ ಬೇಕು ಎಂದು EstateJobs.com ಎಂಬ ವೆಬ್‌ಸೈಟ್‌ನಲ್ಲಿ ಜಾಹೀರಾತು ನೀಡಿದ್ದಾರೆ.

ಅಮೆರಿಕದಲ್ಲಿ ನಮ್ಮ ಕುಟುಂಬಕ್ಕೆ ಒಬ್ಬರು ನಾನಿ ಬೇಕಾಗಿದ್ದಾರೆ. ನಮ್ಮ ಇಬ್ಬರು ಗಂಡು ಮಕ್ಕಳನ್ನು ನೋಡಿಕೊಳ್ಳಲು ಅವರು ವಾರದಲ್ಲಿ 82 ಗಂಟೆ ತೊಡಗಿಸಿಕೊಳ್ಳಬೇಕು. ನಮ್ಮ ಕುಟುಂಬದಲ್ಲಿ ಒಬ್ಬರಾಗುವಂತ ಕಾಳಜಿ, ಮಮತೆ, ಪ್ರೀತಿ, ವಿಶ್ವಾಸ ಹೊಂದಿರುವ ಮಹಿಳೆ ಅರ್ಜಿ ಸಲ್ಲಿಸಬಹುದು. ವಾರದಲ್ಲಿ ಒಂದು ದಿನ ಅವರಿಗೆ ರಜೆ ನೀಡುತ್ತೇವೆ ಎಂದು ಹೇಳಿದ್ಧಾರೆ.

38 ವರ್ಷದ ವಿವೇಕ್ ರಾಮಸ್ವಾಮಿ ಅವರ ಪೂರ್ವಜರು ತಮಿಳುನಾಡಿವರಾಗಿದ್ದಾರೆ. ಪ್ರಸ್ತುತ ಅಮೆರಿಕದಲ್ಲಿ ಜೌಷಧಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ವಿವೇಕ್ ಅವರು ಸದ್ಯ ಒಹಿಯೊ ರಾಜ್ಯದ ಸಿನ್ಸಿನಾಟಿಯಲ್ಲಿ ನೆಲೆಸಿದ್ದಾರೆ. 2015 ರಲ್ಲಿ ಅಪೂರ್ವಾ ಟಿ. ರಾಮಸ್ವಾಮಿ ಅವರನ್ನು ಮದುವೆಯಾಗಿದ್ದಾರೆ. ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *