WWE ಸ್ಟಾರ್ ಜಾನ್ ಸೀನಾ ಅನುಕರಿಸಿದ ಮೋದಿ – ‘ಯೂ ಕಾಂಟ್ ಸೀ ಮೀ’ ಸೀನಾ ಪೋಸ್ಟ್ ವೈರಲ್…!!

WWE ಸ್ಟಾರ್ ಜಾನ್ ಸೀನಾ ಅನುಕರಿಸಿದ ಮೋದಿ – ‘ಯೂ ಕಾಂಟ್ ಸೀ ಮೀ’ ಸೀನಾ ಪೋಸ್ಟ್ ವೈರಲ್…!!

ನ್ಯೂಸ್ ಆ್ಯರೋ‌ : ಅಮೆರಿಕಾ ಪ್ರವಾಸದಲ್ಲಿದ್ದ ಮೋದಿ ಭಾರತಕ್ಕೆ ಮರಳಿದ್ದು, ಇದರ ನಡುವೆ 16 ಬಾರಿಯ ಡಬ್ಲ್ಯುಡಬ್ಲ್ಯುಇ ವಿಶ್ವ ಚಾಂಪಿಯನ್, ಅಮೇರಿಕದ ಜಾನ್ ಸೀನಾ ಇದೀಗ ಭಾರತದ ಪ್ರಧಾನಿ ನರೇಂದ್ರ ಮೋದಿಯ ಫೋಟೋವೊಂದನ್ನು ಹಂಚಿಕೊಂಡಿದ್ದು, ವೈರಲ್ ಆಗಿದೆ.

ಯಾವ ಫೋಟೋ?

ಅಮೇರಿಕ ಪ್ರವಾಸ ಕೈಗೊಂಡಿದ್ದ ಮೋದಿ ಅಲ್ಲಿನ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಪತ್ನಿ ಜಿಲ್ ಬೈಡನ್ ಅವರೊಂದಿಗೆ ಮಾತನಾಡುತ್ತಿದ್ದ ವೇಳೆ ಜಾನ್ ಸೀನಾ ಶೈಲಿಯಲ್ಲಿ ಕೈ ಸನ್ನೆ ಮಾಡಿರುವುದು ಕಂಡು ಬಂದಿದೆ. ಈ ಫೋಟೋವನ್ನು ತಮ್ಮ ಇಸ್ಟಾಗ್ರಾಮ್ ಪೇಜ್ ನಲ್ಲಿ ಸೀನಾ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗೆ ಭರ್ಜರಿ ಸ್ಪಂದನೆ ಲಭಿಸಿದ್ದು, 4 ಲಕ್ಷಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ನೆಟ್ಟಿಗರು, ಮೋದಿ ರಿಯಲ್ ಚಾಂಪಿಯನ್ ಎಂದು ಹೊಗಳಿದ್ದಾರೆ.

ಶುಕ್ರವಾರ ಮೋದಿ ಅಮೇರಿಕದಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದರು. ಅದಕ್ಕೂ ಮುನ್ನ ಆಯೋಜಿಸಿದ್ದ ಔತಣ ಕೂಟದಲ್ಲಿ ಮೋದಿ ಭಾಗವಹಿಸಿದ್ದರು. ಇದರಲ್ಲಿ ಭಾರತ ಮೂಲದ ಗೂಗಲ್ ಸಿಇಒ ಸುಂದರ್ ಪಿಚೈ, ಉದ್ಯಮಿ ಮುಕೇಶ್ ಅಂಬಾನಿ, ಪತ್ನಿ ನೀತಾ ಅಂಬಾನಿ, ಆನಂದ್ ಮಹೀಂದ್ರಾ ಮತ್ತಿತರರು ಉಪಸ್ಥಿತರಿದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *