ಆರ್​ಸಿಬಿಯಿಂದ ಅಧಿಕೃತ ಘೋಷಣೆ; ಕಿಂಗ್ ಕೊಹ್ಲಿ ಆಪ್ತನಿಗೆ ಕ್ಯಾಪ್ಟನ್ಸಿ ಪಟ್ಟ

Rajat Patidar
Spread the love

ನ್ಯೂಸ್ ಆ್ಯರೋ:‌ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ. ಈ ಹಿಂದೆ ಆರ್​ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ಪಾಟಿದಾರ್​ಗೆ ವಹಿಸಲಾಗಿದೆ.

ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ 2021 ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ 31 ವರ್ಷದ ಪಾಟಿದಾರ್​ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ.

ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ಫಾಫ್ ಡುಪ್ಲೆಸಿಸ್ ಕಾಣಿಸಿಕೊಂಡಿದ್ದರು. 2022 ರಿಂದ 2024 ರವರೆಗೆ ಡುಪ್ಲೆಸಿಸ್ ಮುಂದಾಳತ್ವದಲ್ಲಿ ಆರ್​ಸಿಬಿ ಕಣಕ್ಕಿಳಿದಿತ್ತು. ಆದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿತ್ತು.

ಇನ್ನು ಮೆಗಾ ಹರಾಜಿನಲ್ಲಿ ಫಾಫ್ ಡುಪ್ಲೆಸಿಸ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಖರೀದಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತವಾಗಿತ್ತು. ಹೀಗಾಗಿ ವಿರಾಟ್ ಕೊಹ್ಲಿ ನಾಯಕರಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಕೊಹ್ಲಿ ಬದಲಿಗೆ ರಜತ್ ಪಾಟಿದಾರ್ ಅವರನ್ನು ನಾಯಕರಾಗಿ ನೇಮಕ ಮಾಡಲಾಗಿದೆ.

Leave a Comment

Leave a Reply

Your email address will not be published. Required fields are marked *