ರಕ್ತ ಬರುವಂತೆ ಲಾಯರ್ ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆ;ಇತ್ತ ಮಗ, ಗನ್ಮ್ಯಾನ್ ಅರೆಸ್ಟ್
ನ್ಯೂಸ್ ಆ್ಯರೋ: ಒಂದಲ್ಲ ಮತ್ತೊಂದು ವಿಚಾರಕ್ಕೆ ಸುದ್ದಿ ಆಗುತ್ತಿರೋ ಲಾಯರ್ ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆ ಆಗಿದೆ ಎಂದು ತಿಳಿದು ಬಂದಿದೆ. ಕಿಡಿಗೇಡಿಗಳು ಲಾಯರ್ ಜಗದೀಶ್ ಮೇಲೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ.
ಲಾಯರ್ ಜಗದೀಶ್ ಅವರಿಗೆ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದಿದ್ದಾರೆ. ಜಗದೀಶ್ ಮುಖದಲ್ಲಿ ರಕ್ತ ಸುರಿಯುತ್ತಿದ್ದು, ಕಿಡಿಗೇಡಿಗಳ ವಿರುದ್ಧ ವಿಡಿಯೋ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಇವತ್ತು ನನ್ನ ಮೇಲೆ ಮಾರಣಾಂತಿಕ ಹಲ್ಲೆ ಆಗಿದೆ. ಪೊಲೀಸರು ಬಂದು ನಮ್ಮನ್ನು ರಕ್ಷಿಸಿದ್ದಾರೆ. ನನ್ನ ಫ್ಯಾಮಿಲಿ ಮೇಲೆ ಅಟ್ಯಾಕ್ ಆಗಿದೆ. ಸಮಾಜಕ್ಕೆ ಧ್ವನಿ ಆಗಿದ್ದವರ ಮೇಲೆ 200 ಜನ ಅಟ್ಯಾಕ್ ಮಾಡಿದ್ದಾರೆ. ನನ್ನ ಸ್ಕಾರ್ಪಿಯೋ ಕಾರು ಧ್ವಂಸ ಮಾಡಿದ್ದಾರೆ ಎಂದರು.
ನನ್ನ ಗನ್ ಮ್ಯಾನ್ಗೆ ಮಚ್ಚು ದೊಣ್ಣೆಯಿಂದ ಹೊಡೆದಿದ್ದಾರೆ. ನನಗೆ ರಕ್ತ ಬರುವಂತೆ ಹೊಡೆದಿದ್ದಾರೆ. ನಾನು ಸತ್ರು ಪರವಾಗಿಲ್ಲ. ಪುಡಿ ರೌಡಿಗಳು ಅಟ್ಯಾಕ್ ಮಾಡಿದ್ದಾರೆ. ನನ್ನನ್ನು ಕೊಲ್ಲಲು ಯತ್ನಿಸಿದ್ರು. ನನ್ನ ಮಗನ ಮೇಲೂ ಅಟ್ಯಾಕ್ ಆಗಿದೆ ಎಂದು ಜಗದೀಶ್ ಆರೋಪ ಮಾಡಿದ್ದಾರೆ.
ಇತ್ತ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿಯೇ ಪೊಲೀಸರು ಲಾಯರ್ ಜಗದೀಶ್, ಪುತ್ರ ಹಾಗೂ ಇಬ್ಬರು ಗನ್ಮ್ಯಾನ್ಗಳನ್ನ ಅರೆಸ್ಟ್ ಮಾಡಿದ್ದಾರೆ.
ಗಲಾಟೆಯಲ್ಲಿ ಲಾಯರ್ ಜಗದೀಶ್ ಅವರು ಗಾಯಗೊಂಡಿದ್ದರು. ಅವರ ಮೂಗಿನಿಂದ ರಕ್ತ ಬರುತ್ತಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಮಾತನಾಡಿದ್ದರು. ನಿನ್ನೆ ನಡೆದ ಘಟನೆಯಲ್ಲಿ ಜಗದೀಶ್ ಗಾಯಗೊಂಡಿದ್ದಕ್ಕೆ ಪೊಲೀಸರೇ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಮೆಡಿಕಲ್ ಚೆಕಪ್ ಮಾಡಿಸಿ ಪೊಲೀಸರು ಜಗದೀಶ್, ಅವರ ಮಗ ಆರ್ಯನ್ ಹಾಗೂ ಇಬ್ಬರು ಗನ್ ಮ್ಯಾನ್ಗಳನ್ನು ಅರೆಸ್ಟ್ ಮಾಡಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Leave a Comment