ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ಆ್ಯರೋ : ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್​ ಸಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ನೇಮಕಾತಿ ನಡೆಯಲಿದೆ.

ಒಟ್ಟು 230 ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

ಈ ಹುದ್ದೆಗಳಿಗೆ ಸೆಪ್ಟೆಂಬರ್​ 1ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಸೆಪ್ಟೆಂಬರ್​ 30 ಆಗಿದೆ. ನವೆಂಬರ್ 4 ಮತ್ತು 6ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

ಹುದ್ದೆ ವಿವರ : ಗ್ರೂಪ್​ ಸಿ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 230 ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆ ಭರ್ತಿ ನಡೆಸಲಾಗುವುದು.

ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿಯನ್ನು ಪಡೆದಿರಬೇಕು. ಪದವಿಯಲ್ಲಿ ಒಂದು ವಿಷಯ ಅರ್ಥಶಾಸ್ತ್ರ ಅಥವಾ ಗಣಿತವನ್ನು ಅಧ್ಯಯನ ಮಾಡಿರಬೇಕು. ಅಥವಾ ಕಾಮರ್ಸ್​​ ಪದವಿಯನ್ನು ಅಧ್ಯಯನ ಮಾಡಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ 18 ವರ್ಷವಾಗಿದ್ದು, ಗರಿಷ್ಠ ವಯೋಮಿತಿ 35ವರ್ಷ ಆಗಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ವೇತನ : ಈ ಹುದ್ದೆಗಳಿಗೆ ಮಾಸಿಕ ₹33,450 ನಿಂದ ₹62,600 ವೇತನ ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ವಿಕಲ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡಲಾಗಿದೆ. ಮಾಜಿ ಸೇವಾ ಅಭ್ಯರ್ಥಿಗಳಿಗೆ 50 ರೂ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ : ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು.

Related post

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಆರೋಗ್ಯ ಪರಿಪೂರ್ಣವಾಗಿರುತ್ತದೆ. ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಕುಟುಂಬದೊಂದಿಗೆ…
ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…

Leave a Reply

Your email address will not be published. Required fields are marked *