AIASL Jobs : ಖಾಲಿ ಇರುವ 998 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ – ಅರ್ಜಿ‌ ಸಲ್ಲಿಸಲು ಉಪಯುಕ್ತ ಮಾಹಿತಿ ಇಲ್ಲಿದೆ..

AIASL Jobs : ಖಾಲಿ ಇರುವ 998 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ – ಅರ್ಜಿ‌ ಸಲ್ಲಿಸಲು ಉಪಯುಕ್ತ ಮಾಹಿತಿ ಇಲ್ಲಿದೆ..

ನ್ಯೂಸ್ ಆ್ಯರೋ‌ : ಏರ್ ಇಂಡಿಯಾ ಏರ್ ಟ್ರಾನ್ಸ್ ಪೋರ್ಟ್ ಸರ್ವಿಸ್ ಲಿಮಿಟೆಡ್(AIASL) ಖಾಲಿ ಇರುವ 998 ಹುದ್ದೆಗಳ ಭರ್ತಿಗೆ (Job Vacancy) ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 18 ಕೊನೆಯ ದಿನ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಶೈಕ್ಷಣಿಕ ಅರ್ಹತೆ

ಉದ್ಯೋಗದ ಸ್ಥಳ ಮಹಾರಾಷ್ಟ್ರ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ತೇರ್ಗಡೆಯಾಗಿರಬೇಕು, ಇಂಗ್ಲಿಷ್ ಮತ್ತು ಹಿಂದಿ ಜೊತೆಗೆ ಸ್ಥಳೀಯ ಭಾಷೆ ತಿಳಿದಿರಬೇಕು. ಹ್ಯಾಂಡಿಮ್ಯಾನ್-971 ಮತ್ತು ಯುಟಿಲಿಟಿ ಏಜೆಂಟ್-27 ಹುದ್ದೆಗಳು ಖಾಲಿ ಇವೆ.

ವಯೋಮಿತಿ

ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 31 ವರ್ಷ, ಎಸ್.ಸಿ./ಎಸ್.ಟಿ. ಅಭ್ಯರ್ಥಿಗಳಿಗೆ 33 ವರ್ಷ. ಸಾಮಾನ್ಯ, ಒ.ಬಿ.ಸಿ. ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಸ್.ಸಿ./ಎಸ್.ಟಿ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

ಆಯ್ಕೆ ವಿಧಾನ

ದೈಹಿಕ ಪರೀಕ್ಷೆ, ನೇರ ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುತ್ತದೆ. ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆದು, ಭರ್ತಿ ಮಾಡಿ, ಅಗತ್ಯ ದಾಖಲೆಗಳ ಪ್ರತಿಯನ್ನು ಇರಿಸಿ ಕಳುಹಿಸಬೇಕು. ಅರ್ಜಿ ನಮೂನೆ ಡೌನ್ ಲೋಡ್ ಮಾಡಬೇಕಾದ ವೆಬ್ ಸೈಟ್ http://www.aiasl.in/

ಅರ್ಜಿ ಸಲ್ಲಿಸಬೇಕಾದ ವಿಳಾಸ:

HRD Department, AI Airport Services Limited, GSD Complex, Near Sahar Police Station, CSMI Airport, Terminal-2, Gate No. 5, Sahar, Andheri-East, Mumbai-400099.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *