ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ ನಲ್ಲಿ ಮ್ಯಾನೇಜರ್ ‌ಹುದ್ದೆಗಳು – ಮಾಸಿಕ ವೇತನ 2,20,000/-* : ವಿವರ ಇಲ್ಲಿದೆ‌.

ಕೊಚ್ಚಿನ್ ಶಿಪ್​ಯಾರ್ಡ್​ ಲಿಮಿಟೆಡ್ ನಲ್ಲಿ ಮ್ಯಾನೇಜರ್ ‌ಹುದ್ದೆಗಳು – ಮಾಸಿಕ ವೇತನ 2,20,000/-* : ವಿವರ ಇಲ್ಲಿದೆ‌.

ನ್ಯೂಸ್ ಆ್ಯರೋ : ಕೊಚ್ಚಿನ್​ ಶಿಪ್​ಯಾರ್ಡ್​ ಲಿಮಿಟೆಡ್​ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 9, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ . ಅಭ್ಯರ್ಥಿಗಳನ್ನು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಲ್ಪೆಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವಿದ್ಯಾರ್ಹತೆ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ನೇವಲ್ ಆರ್ಕಿಟೆಕ್ಚರ್‌ನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ 48 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮಾಸಿಕ ವೇತನ

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ ರೂ.80000 ರಿಂದ ರೂ. 220000/- ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ಪವರ್ ಪಾಯಿಂಟ್ ಪ್ರೆಸೆಂಟೇಶನ್, ಅನುಭವ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ನಿಮ್ಮ ಅರ್ಜಿ ನಮೂನೆಯನ್ನು ಈ ಇ-ಮೇಲ್ ಐಡಿ, hr@udupicsl.com ಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

ಇನ್ನು ಆ.9 ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕವಾಗಿದ್ದು, ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: cochinshipyard.com

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *