ಡಿಪ್ಲೊಮಾ ಪಾಸಾದವರಿಗೆ BHEL ನಲ್ಲಿ ಭರ್ಜರಿ ಉದ್ಯೋಗಾವಕಾಶ – ನೀವು ಆಶ್ಚರ್ಯ ಪಡುವ ವೇತನ, ಸೌಲಭ್ಯಗಳು ಇಲ್ಲಿವೆ..

ಡಿಪ್ಲೊಮಾ ಪಾಸಾದವರಿಗೆ BHEL ನಲ್ಲಿ ಭರ್ಜರಿ ಉದ್ಯೋಗಾವಕಾಶ – ನೀವು ಆಶ್ಚರ್ಯ ಪಡುವ ವೇತನ, ಸೌಲಭ್ಯಗಳು ಇಲ್ಲಿವೆ..

ನ್ಯೂಸ್ ಆ್ಯರೋ : ಡಿಪ್ಲೊಮಾ ಪದವಿ ಮುಗಿಸಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗಾವಕಾಶವಿದೆ. ಭಾರತೀಯ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಶೈಕ್ಷಣಿಕ ಅರ್ಹತೆ

ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ‌ ಖಾಲಿ ಇರುವ ಒಟ್ಟು 10 ಪ್ರಾಜೆಕ್ಟ್ ಸೂಪರ್ ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಎಲೆಕ್ಟ್ರಾನಿಕ್ಸ್ ಡಿಪ್ಲೊಮಾ ಅಥವಾ ಎಲೆಕ್ಟ್ರಿಕ್ ಪದವಿ ಪಡೆದಿರಬೇಕು.

ವಯೋಮಿತಿ

ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ‌ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಯಸ್ಸು 2023 ಮಾರ್ಚ್ 31ಕ್ಕೆ ಅನ್ವಯವಾಗುವಂತೆ ಗರಿಷ್ಠ 32 ಮೀರಬಾರದು.

ವಯೋಮಿತಿ ಸಡಿಲಿಕೆ

  • OBC ಅಭ್ಯರ್ಥಿಗಳು-3 ವರ್ಷ
    SC/ST ಅಭ್ಯರ್ಥಿಗಳು-5 ವರ್ಷ
    PwBD ಅಭ್ಯರ್ಥಿಗಳು-10 ವರ್ಷ
    PwBD(OBD) ಅಭ್ಯರ್ಥಿಗಳು-13 ವರ್ಷ
    PwBD(SC/ST) ಅಭ್ಯರ್ಥಿಗಳು- 15 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
  • ಅರ್ಜಿ ಶುಲ್ಕ ಮತ್ತು ವೇತನ

SC/ST/PwBd ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಾಮಾನ್ಯ/OBC ಮತ್ತು EWS ಅಭ್ಯರ್ಥಿಗಳಿಗೆ ₹200 ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಹಾಗೆಯೇ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹43,550 ರೂ ವೇತನ ನಿಗದಿಯಾಗಿದೆ.

ಉದ್ಯೋಗ ಸ್ಥಳ ಮತ್ತು ಆಯ್ಕೆ ಪ್ರಕ್ರಿಯೆ

ಆಯ್ಕೆಯಾದ ಅಭ್ಯರ್ಥಿಗಳನ್ನು ಬೆಂಗಳೂರನಲ್ಲಿ ಹುದ್ದೆಗೆ ನೇಮಿಸಲಾಗುತ್ತದೆ. ಜೊತೆಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ‌.

ಆಫ್ ಲೈನ್ ಅರ್ಜಿ ಸಲ್ಲಿಕೆ ಹೇಗೆ?

ಆಪ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ 2023 ಮೇ.6ರ ಒಳಗೆ-

AGM (HR)
ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ಎಲೆಕ್ಟ್ರಾನಿಕ್ಸ್ ವಿಭಾಗ
P.B.No.2606
ಮೈಸೂರು ರಸ್ತೆ
ಬೆಂಗಳೂರು-560026
ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ‌ ಮಾಹಿತಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ www.bhel.com ಗೆ ಭೇಟಿ ನೀಡಬಹುದು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *