ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಹೈಕೋರ್ಟ್‌ನಲ್ಲಿ ಡ್ರೈವರ್‌ ಹುದ್ದೆ – 39 ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ₹ 81,000 ಸಂಬಳ

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಹೈಕೋರ್ಟ್‌ನಲ್ಲಿ ಡ್ರೈವರ್‌ ಹುದ್ದೆ – 39 ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ₹ 81,000 ಸಂಬಳ

ನ್ಯೂಸ್‌ ಆ್ಯರೋ : ಕರ್ನಾಟಕ ಹೈಕೋರ್ಟ್‌ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 39 ಚಾಲಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಹಾಕಲು ಏಪ್ರಿಲ್ 6, 2023 ಕೊನೆಯ ದಿನಾಂಕವಾಗಿದೆ.

ಹುದ್ದೆಯ ಮಾಹಿತಿ: ಡ್ರೈವರ್ (ಕಲ್ಯಾಣ ಕರ್ನಾಟಕ ಪ್ರದೇಶ- ಸ್ಥಳೀಯ ಕೇಡರ್)- 2, ಡ್ರೈವರ್ (ಉಳಿದ ಪೋಷಕ ವರ್ಗ)- 37

ವಿದ್ಯಾರ್ಹತೆ: ಹೈಕೋರ್ಟ್‌ನ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪಾಸಾಗಿರಬೇಕು.

ವಯೋಮಿತಿ: ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 6, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಎಸ್‌ಸಿ/ಎಸ್‌ಟಿ/ ಪ್ರವರ್ಗ 1 ಅಭ್ಯರ್ಥಿಗಗಳಿಗೆ 5 ವರ್ಷ, ಪ್ರವರ್ಗ- 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ ಇದೆ.

ಅರ್ಜಿ ಶುಲ್ಕ: ಎಸ್‌ಸಿ/ಎಸ್ಟಿ/ ಪ್ರವರ್ಗ-1 ಅಭ್ಯರ್ಥಿಗಳಿಗೆ ₹ 250, ಹಿಂದುಳಿದ ವರ್ಷ/ ಸಾಮಾನ್ಯ ಅಭ್ಯರ್ಥಿಗಳಿಗೆ ₹ 500 ಶುಲ್ಕ ನಿಗದಿ ಮಾಡಲಾಗಿದೆ. ಆನ್​ಲೈನ್​ / ಚಲನ್ ಮೂಲಕ ಶುಲ್ಕ ಪಾವತಿ ಮಾಡಬೇಕು.

ಇತರ ಮಾಹಿತಿ: ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ₹25,500-81,100 ವೇತನ ಇರುತ್ತದೆ. ಉದ್ಯೋಗದ ಸ್ಥಳ ಬೆಂಗಳೂರು ಆಗಿರುತ್ತದೆ. ಆಯ್ಕೆ ಪ್ರಕ್ರಿಯೆಯು ಅಭ್ಯರ್ಥಿಗಳಿಗೆ ಚಾಲನಾ ಪರೀಕ್ಷೆ ಇರುತ್ತದೆ. ಅದರಲ್ಲಿ ಪಾಸಾದವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಆರಂಭ ದಿನಾಂಕ ಮಾರ್ಚ್‌ 06, ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್ 6, ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ ಏಪ್ರಿಲ್ 12 ಆಗಿದೆ. ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು.

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *