
ಯುಗಾದಿ ಹಬ್ಬಕ್ಕೂ ಮೊದಲೇ KPTCL, ಎಸ್ಕಾಂ ನೌಕರರಿಗೆ ಗುಡ್ ನ್ಯೂಸ್ – ಶೇ. 20ರಷ್ಟು ವೇತನ ಹೆಚ್ಚಿಸಿ ಸರ್ಕಾರದ ಆದೇಶ
- ಉದ್ಯೋಗ ಮಾಹಿತಿ
- March 15, 2023
- No Comment
- 1487
ನ್ಯೂಸ್ ಆ್ಯರೋ : ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರಿಗೆ ರಾಜ್ಯ ಸರ್ಕಾರವು ಯುಗಾದಿ ಹಬ್ಬಕ್ಕೂ ಮುನ್ನವೇ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಶೇ. 20 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರು ಪ್ರತಿಭಟನೆಗೆ ಮುಂದಾಗಿದ್ದರು. ಈ ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೆಪಿಟಿಸಿಎಲ್ ಹಾಗೂ ಎಲ್ಲಾ ಎಸ್ಕಾಂ ನೌಕರರ ವೇತನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2022 ರ ಏಪ್ರಿಲ್ ನಿಂದ ಪೂರ್ವನ್ವಯವಾಗುವಂತೆ ಶೇ. 20 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ಕೆಲದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರು ವೇತನ ಹೆಚ್ಚಳಗೊಳಿಸುವಂತೆ ಮುಷ್ಕರ ಕೈಗೊಂಡ ಬಳಿಕ ಎಚ್ಚೆತ್ತ ಸರ್ಕಾರ ಶೇ.17 ರಷ್ಟು ವೇತನ ಪರಿಷ್ಕರಣೆ ಮಾಡಿ ಹೆಚ್ಚಿಸಿತ್ತು. ಸದ್ಯ ಮತ್ತೆ ಮುಷ್ಕರದ ಬಿಸಿ ಆರಂಭಕ್ಕೂ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡಿದೆ.