10ನೇ ತರಗತಿ ಪಾಸಾದವರಿಗೆ ಐಎಎಫ್‌ನಲ್ಲಿ ಉದ್ಯೋಗ – ಅಗ್ನಿವೀರ್‌ ವಾಯು ಹುದ್ದೆಗೆ ಅರ್ಜಿ ಆಹ್ವಾನ

10ನೇ ತರಗತಿ ಪಾಸಾದವರಿಗೆ ಐಎಎಫ್‌ನಲ್ಲಿ ಉದ್ಯೋಗ – ಅಗ್ನಿವೀರ್‌ ವಾಯು ಹುದ್ದೆಗೆ ಅರ್ಜಿ ಆಹ್ವಾನ

ನ್ಯೂಸ್‌ ಆ್ಯರೋ : ಭಾರತೀಯ ವಾಯುಪಡೆಯ ಅಗ್ನಿವೀರ್​ ವಾಯು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಸೆ.16ರಂದು ನೇರ ಸಂದರ್ಶನಕ್ಕೆ ಹಾಜರಾಗುವಂತೆ ತಿಳಿಸಿದೆ. ಈ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವಾಕ್ – ಇನ್ – ಇಂಟರ್ವ್ಯೂಗೆ ಹಾಜರಾಗಬಹುದು. ಈ ಲೇಖನದಲ್ಲಿ ಈ ಅಗ್ನಿವೀರ್ ವಾಯು ಹುದ್ದೆಯ ಮಾಹಿತಿಯನ್ನು ವಿವರಿಸಲಾಗಿದೆ.

ಹುದ್ದೆಗಳ ವಿವರಗಳು:

ಸಂಸ್ಥೆಯ ಹೆಸರು : ಇಂಡಿಯನ್ ಏರ್ ಫೋರ್ಸ್

ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಯ ಹೆಸರು: ಅಗ್ನಿವೀರ್​ ವಾಯು

ಶೈಕ್ಷಣಿಕ ಅರ್ಹತೆ:

ಇಂಡಿಯನ್ ಏರ್ ಫೋರ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 21 ವರ್ಷದೊಳಗಿರಬೇಕು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಸ್ಟ್ರೀಮ್ ಸೂಕ್ತತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ರೂ.30000 ರಿಂದ 40000/- ರೂ. ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ನೇರ ಸಂದರ್ಶನ ನಡೆಯುವ ದಿನಾಂಕ: 16-ಸೆಪ್ಟೆಂಬರ್-2023
  • ನೇಮಕಾತಿ ರ್ಯಾಲಿಯ ದಿನಾಂಕ : 12 ರಿಂದ 17 ಸೆಪ್ಟೆಂಬರ್ 2023
  • ಹುದ್ದೆಗಳ ನೇಮಕಾತಿ ಪರೀಕ್ಷೆಯ ದಿನಾಂಕ: 12 ರಿಂದ 16 ಸೆಪ್ಟೆಂಬರ್ 2023
  • ಹುದ್ದೆಗಳಿಗೆ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01-ಸೆಪ್ಟೆಂಬರ್-2023

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *