ಭಾರತೀಯ ನೌಕಾಪಡೆಯ ಅಗ್ನಿವೀರ್ ನೇಮಕಾತಿ 2023 – ಆಗಸ್ಟ್ 20 ರೊಳಗೆ ಅರ್ಜಿ ಸಲ್ಲಿಸಿ..

ಭಾರತೀಯ ನೌಕಾಪಡೆಯ ಅಗ್ನಿವೀರ್ ನೇಮಕಾತಿ 2023 – ಆಗಸ್ಟ್ 20 ರೊಳಗೆ ಅರ್ಜಿ ಸಲ್ಲಿಸಿ..

ನ್ಯೂಸ್ ‌ಆ್ಯರೋ‌ : ಇಂಡಿಯನ್‌ ಏರ್‌ಫೋರ್ಸ್‌ 2023ನೇ ಸಾಲಿನಲ್ಲಿ ಭರ್ತಿ ಮಾಡಲು ಉದ್ದೇಶಿಸಿರುವ ಇನ್‌ಟೇಕ್‌ ಅಗ್ನಿವೀರ್‌ ವಾಯು ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಭಾರತ ಮಿಲಿಟರಿ ಸೇವೆಗಳಲ್ಲಿ ಹುದ್ದೆ ಬಯಸುವವರು ಆನ್‌ಲೈನ್‌ ಮೂಲಕ ಅಪ್ಲಿಕೇಶನ್‌ ಸಲ್ಲಿಸಿಬಹುದಾಗಿದ್ದು, ಅರ್ಹತೆ, ಪ್ರಮುಖ ದಿನಾಂಕಗಳು, ಅರ್ಜಿ ವಿಧಾನ, ಇತರೆ ಮಾಹಿತಿ ಕೆಳಗಿನಂತಿದೆ.

ಅಗ್ನಿಪಥ್​ ಮೂಲಕ ಭೂ, ವಾಯು ಮತ್ತು ನೌಕಾ ಸೇನೆಯಲ್ಲಿ ಕಾಲಕಾಲಕ್ಕೆ ನೇಮಕಾತಿ ನಡೆಸಲಾಗುತ್ತಿದ್ದು, ಅದರನುಸಾರವಾಗಿ ಇದೀಗ ವಾಯುಪಡೆಯಲ್ಲಿ ಅಗ್ನಿವೀರ್​ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ನಡೆಸಲಾಗುವ ನೇಮಕಾತಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು.

ಅಲ್ಲದೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದ್ದು, ಈ ಮೊದಲು ಆಗಸ್ಟ್​ 17ರವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿತ್ತು. ಇದೀಗ ಈ ದಿನವನ್ನು ಮೂರು ದಿನ ವಿಸ್ತರಿಸಿದ್ದು, ಅರ್ಜಿ ಸಲ್ಲಿಕೆಗೆ ಆಗಸ್ಟ್​ 20ರವರೆಗೆ ಅವಕಾಶ ನೀಡಲಾಗಿದೆ.

ಅರ್ಹತೆ

ಅವಿವಾಹಿತ ಯುವಕ ಮತ್ತು ಯುವತಿಯರನ್ನು ಅಗ್ನಿವೀರ್​​ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.

ವಿದ್ಯಾರ್ಹತೆ

ಪಿಯುಸಿ (ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್​​) ಅಥವಾ 3 ವರ್ಷಗಳ ಡಿಪ್ಲೋಮೊ ಪದವಿ ಪಡೆದಿರಬೇಕು.

ವಯೋಮಿತಿ: ಗರಿಷ್ಠ ವಯೋಮಿತಿ 21 ವರ್ಷ. ಅಂದರೆ ಅಭ್ಯರ್ಥಿಗಳು 27 ಜೂನ್ 2003ರಿಂದ 27 ಡಿಸೆಂಬರ್ 2006ರೊಳಗೆ ಜನಿಸಿದವರಾಗಿರಬೇಕು.

ವೇತನ: ಮೊದಲ ವರ್ಷದಲ್ಲಿ 30,000 ರೂಪಾಯಿ, ಎರಡನೇ ವರ್ಷದಲ್ಲಿ 33,000, ಮೂರನೇ ವರ್ಷದಲ್ಲಿ 36,500, ನಾಲ್ಕನೇ ವರ್ಷ 40,000 ರೂ. ವೇತನ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ದೈಹಿಕ ಸಾಮರ್ಥ್ಯ ಪರೀಕ್ಷೆ, ಹೊಂದಿಕೊಳ್ಳುವಿಕೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಆನ್‌ಲೈನ್ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲ್ಲಿದ್ದು, ಎಲ್ಲಾ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವಾಗಿ 250 ರೂ. ಪಾವತಿಸಬೇಕು.

ಹೀಗೆ ಅರ್ಜಿ ಸಲ್ಲಿಕೆ ಮಾಡಿ: IAF ನೇಮಕಾತಿ ಅಧಿಸೂಚನೆ 2023 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು https://agnipathvayu.cdac.in/AV/ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಭರ್ತಿ ಮಾಡಬಹುದು.

ಹೆಚ್ಚಿನ ಹಾಗೂ ಸಂಪೂರ್ಣ ಮಾಹಿತಿಗೆ indianairforce.nic.in ಜಾಲತಾಣಕ್ಕೆ ಭೇಟಿ ನೀಡಬಹುದು.

ಇನ್ನು ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು 20 ಆಗಸ್ಟ್ 2023 ಕೊನೆಯ ದಿನಾಂಕವಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *