ITBP Constable Posts Notification: 10th Pass Eligibility

Jobs : ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಆರಂಭ -10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಿ : ವಿವರ ಇಲ್ಲಿದೆ..

ನ್ಯೂಸ್ ಆ್ಯರೋ ‌: ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ನಲ್ಲಿ (ಐಟಿಬಿಪಿ) ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು ದೇಶಾದ್ಯಂತ ನೇಮಕಾತಿ ನಡೆಯಲಿದೆ.

ಒಟ್ಟು 248 ಹುದ್ದೆಗಳಿವೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೂ ಅವಕಾಶವಿದೆ.

ಹುದ್ದೆಗಳ ವಿವರ:
ಐಟಿಬಿಪಿಯಲ್ಲಿ ಖಾಲಿ ಇರುವ 248 ಹುದ್ದೆಗಳ ಭರ್ತಿ. ಕ್ರೀಡಾ ಕೋಟಾದ ಮೇಲೆ ಭರ್ತಿಗೆ ನಿರ್ಧಾರ.

ವಿದ್ಯಾರ್ಹತೆ: ಅಧಿಕೃತ ಮಂಡಳಿಯಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಕನಿಷ್ಟ 18 ವರ್ಷ, ಗರಿಷ್ಟ ವಯೋಮಿತಿ 23 ವರ್ಷ.ವೇತನ: ಮಾಸಿಕ ವೇತನ 21,700-69,100 ರೂಪಾಯಿ.

ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಭರಿಸಬೇಕು. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿ ಮಾಡಬೇಕು.

ಆಯ್ಕೆ ಪ್ರಕ್ರಿಯೆ:
ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ.

ಇನ್ನು ಈ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 28. ಈ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಇನ್ನಿತರ ಮಾಹಿತಿಗೆ recruitment.itbpolice.nic.in ಜಾಲತಾಣಕ್ಕೆ ಭೇಟಿ ನೀಡಿ.