ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್‌ ಸರ್ವಿಸ್ ಲಿಮಿಟೆಡ್‌ ನಲ್ಲಿ ಭರ್ಜರಿ ಉದ್ಯೋಗಾವಕಾಶ – SSLC ಪಾಸಾದವರು ಅರ್ಜಿ ಸಲ್ಲಿಸಿ..

ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್‌ ಸರ್ವಿಸ್ ಲಿಮಿಟೆಡ್‌ ನಲ್ಲಿ ಭರ್ಜರಿ ಉದ್ಯೋಗಾವಕಾಶ – SSLC ಪಾಸಾದವರು ಅರ್ಜಿ ಸಲ್ಲಿಸಿ..

ನ್ಯೂಸ್ ಆ್ಯರೋ : ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್​ ಸಂಸ್ಥೆ166 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.ಅಪ್ರೆಂಟಿಸ್, ಯುಟಿಲಿಟಿ ಏಜೆಂಟ್ ಕಮ್ ರಾಂಪ್ ಡ್ರೈವರ್ ಹಾಗೂ ಗ್ರಾಹಕ ಸೇವಾ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯು ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.

166 ಹುದ್ದೆಗಳು ಖಾಲಿ

ಒಟ್ಟು 166 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಗ್ರಾಹಕ ಸೇವಾ ಕಾರ್ಯನಿರ್ವಾಹಕ ವಿಭಾಗದಲ್ಲಿ 11 ಹುದ್ದೆಗಳು, ಜೂನಿಯರ್ ಗ್ರಾಹಕ ಸೇವಾ ಕಾರ್ಯನಿರ್ವಾಹಕ ವಿಭಾಗದಲ್ಲಿ 25 ಹುದ್ದೆಗಳು, ಯುಟಿಲಿಟಿ ಏಜೆಂಟ್ ಮತ್ತು ರಾಂಪ್ ಡ್ರೈವರ್ ವಿಭಾಗದಲ್ಲಿ 7 ಹುದ್ದೆಗಳು, ಹ್ಯಾಂಡಿಮ್ಯಾನ್ ವಿಭಾಗದಲ್ಲಿ 45 ಹುದ್ದೆಗಳು, ಹ್ಯಾಂಡಿವುಮನ್ ವಿಭಾಗದಲ್ಲಿ 36 ಹುದ್ದೆಗಳು, ಹ್ಯಾಂಡಿಮ್ಯಾನ್- ಡ್ಯೂಟಿ ಆಫೀಸರ್ ವಿಭಾಗದಲ್ಲಿ 6 ಹುದ್ದೆಗಳು, ಜೂನಿಯರ್ ಆಫೀಸರ್ ಟೆಕ್ನಿಕಲ್ ವಿಭಾಗದಲ್ಲಿ 4 ಹುದ್ದೆಗಳು, ಜೂನಿಯರ್ ಆಫೀಸರ್ ಪ್ಯಾಸೆಂಜರ್ ವಿಭಾಗದಲ್ಲಿ 12 ಹುದ್ದೆಗಳು ಖಾಲಿ ಇವೆ.

ಅರ್ಹತೆಗಳೇನು..?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 10ನೇ ತರಗತಿ, ಪಿಯುಸಿ ಹಾಗೂ ಪದವಿ ಶಿಕ್ಷಣದಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ ಎಷ್ಟು.?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 500 ರೂ. ನಿಗದಿ ಮಾಡಿದ್ದು, ಎಸ್ಸಿ ಹಾಗೂ ಎಸ್ ಟಿ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ವಯೋಮಿತಿ ಎಷ್ಟು.?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 28 ವರ್ಷ ವಯೋಮಿತಿ ಇರಲಿದ್ದು, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 31 ವರ್ಷವನ್ನು ನಿಗದಿ ಮಾಡಲಾಗಿದೆ. ಹಾಗೇ ಎಸಿ ಹಾಗೂ ಎಸ್ ಟಿ ಅಭ್ಯರ್ಥಿಗಳಿಗೆ 33 ವರ್ಷಗಳ ವಯೋಮಿತಿ ಇದೆ.

ಇನ್ನೂ ಈ ಹುದ್ದೆಗಳ ಭರ್ತಿಗೆ ಫೆ.07 ರಿಂದ 13 ರವರೆಗೆ ನೇರ ಸಂದರ್ಶನ ನಡೆಯಲ್ಲಿದ್ದು, ಸಂದರ್ಶನ ನಡೆಯುವ ಸ್ಥಳ ಮತ್ತು ವಿಳಾಸ

Hotel Pristine Residency. Airport Road, Next to S.V.P. International, Sardarnagar, Hansol, Ahmedabad, Gujarat-382475 ಇದಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *