ಬಿಇ, ಡಿಪ್ಲೊಮ ಪಾಸಾದವರಿಗೆ ಮೆಸ್ಕಾಂ’ನಲ್ಲಿ ಉದ್ಯೋಗಾವಕಾಶ – ಒಟ್ಟು 200 ಹುದ್ದೆಗಳು, ಅರ್ಜಿ ಹೀಗೆ ಸಲ್ಲಿಸಿ..

ಬಿಇ, ಡಿಪ್ಲೊಮ ಪಾಸಾದವರಿಗೆ ಮೆಸ್ಕಾಂ’ನಲ್ಲಿ ಉದ್ಯೋಗಾವಕಾಶ – ಒಟ್ಟು 200 ಹುದ್ದೆಗಳು, ಅರ್ಜಿ ಹೀಗೆ ಸಲ್ಲಿಸಿ..

ನ್ಯೂಸ್ ಆ್ಯರೋ : ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್‌ನ ಹೆಚ್‌ಆರ್‌ಡಿ ಕೇಂದ್ರವು ಗ್ರಾಜುಯೇಟ್‌ ಅಪ್ರೆಂಟಿಸ್, ಡಿಪ್ಲೊಮ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು 200 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಪದವಿ ಅಪ್ರೆಂಟಿಸ್‌ ವಿಭಾಗದಲ್ಲಿ 70 ಹುದ್ದೆಗಳು, ತಂತ್ರಜ್ಞ ಡಿಪ್ಲೊಮಾ ಅಪ್ರೆಂಟಿಸ್ ವಿಭಾಗದಲ್ಲಿ- 65 ಹುದ್ದೆಗಳು ಹಾಗೂ ಜನರಲ್ ಸ್ಟ್ರೀಮ್ ಪದವೀಧರರು ಅಪ್ರೆಂಟಿಸ್ ವಿಭಾಗದಲ್ಲಿ 65 ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ :

ಪದವಿ ಅಪ್ರೆಂಟಿಸ್‌ಗಳು- ಬಿಇ ಅಥವಾ ಬಿ.ಟೆಕ್ ಮಾಡಿರಬೇಕು, ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್‌ಗಳು- ಡಿಪ್ಲೊಮಾ ಪೂರ್ಣಗೊಳಿಸಿರಬೇಕು ಹಾಗೂ ಜನರಲ್ ಸ್ಟ್ರೀಮ್ ಪದವೀಧರರು ಅಪ್ರೆಂಟಿಸ್- BA, B.Sc, B.Com, BBA, BCA ಪದವಿ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ, ಪರ್ಸನಾಲಿಟಿ ಟೆಸ್ಟ್‌ ಮತ್ತು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅಪ್ರೆಂಟಿಸ್ ಹುದ್ದೆಗಳಿಗೆ ಸ್ಟೈಫಂಡ್ ಎಷ್ಟು?

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳು : ಮಾಸಿಕ 9000 ರೂ.
ಟೆಕ್ನೀಷಿಯನ್ Background ಹುದ್ದೆಗಳು: ಮಾಸಿಕ 8000 ರೂ.
ಜನರಲ್ ಸ್ಟ್ರೀಮ್ ಪದವೀಧರರು ಅಪ್ರೆಂಟಿಸ್- ಮಾಸಿಕ 9000 ರೂ.

ಇನ್ನು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 12 ಕೊನೆ ದಿನಾಂಕವಾಗಿದ್ದು, NATS ಪೋರ್ಟಲ್‌ನಲ್ಲಿ ನೋಂದಾಯಿಸಲು ಸೆಪ್ಟೆಂಬರ್ 06 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ
http://mescom.karnataka.gov.in/

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *