
ಮಂಗಳೂರು ಬಂದರಿನಲ್ಲಿ ತಿಂಗಳಿಗೆ 1.40 ಲಕ್ಷ ವೇತನ ಇರೋ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ – ಡಿಗ್ರಿ ಮುಗಿಸಿದವರಿಗೆ ಬಂಪರ್ ಅವಕಾಶ…!!
- ಉದ್ಯೋಗ ಮಾಹಿತಿ
- January 31, 2023
- No Comment
- 3668
ನ್ಯೂಸ್ ಆ್ಯರೋ : ನೀವು ಡಿಗ್ರಿ ಮುಗಿಸಿದ್ದೀರಾ?, ನೀವು ಕೆಲಸ ಹುಡುಕುತ್ತಿದ್ದೀರಾ?, ಹಾಗಿದ್ದರೆ ನಿಮದೊಂದು ಬಂಪರ್ ಉದ್ಯೋಗಾವಕಾಶವಿದೆ. ನವ ಮಂಗಳೂರು ಬಂದರು ಟ್ರಸ್ಟ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅರ್ಜಿ ಆಹ್ವಾನಿಸಿದೆ. 2 ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗಳು ಖಾಲಿ ಇದ್ದು, ಫೆಬ್ರವರಿ 13 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಈ ವಿವರಗಳನ್ನು ತಿಳಿದುಕೊಳ್ಳಿ.
ಶೈಕ್ಷಣಿಕ ಅರ್ಹತೆಗಳೇನು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪಡೆದಿರಬೇಕು.
ವಯೋಮಿತಿ ಹೀಗಿರಬೇಕು..
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆಯಂತೆ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಜೊತೆಗೆ ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತಾದೆ.
ಮಾಸಿಕ ವೇತನ :
ಈ ಉದ್ಯೋಗಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 40,000- 1.40 ಲಕ್ಷ ಸಂಬಳ ನೀಡಲಾಗುತ್ತದೆ.
ಉದ್ಯೋಗ ಸ್ಥಳ :
ಮಂಗಳೂರುನಲ್ಲಿರುವ ‘ನವ ಮಂಗಳೂರು ಬಂದರು ಪ್ರಾಧಿಕಾರ’ .
ಆಯ್ಕೆ ಪ್ರಕ್ರಿಯೆ ಹೇಗೆ ?
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನವಿರುತ್ತದೆ.
ಅರ್ಜಿ ಸಲ್ಲಿಕೆ ವಿಧಾನ :
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು
ಸೆಕ್ರೆಟರಿ I/c
ನವ ಮಂಗಳೂರು ಬಂದರು ಪ್ರಾಧಿಕಾರ
ಪಣಂಬೂರು
ಮಂಗಳೂರು-575010
ಈ ವಿಳಾಸಕ್ಕೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸು 12/1/2023 ಆರಂಭದ ದಿನಾಂಕವಾಗಿದ್ದು, 2023ರ ಫೆಬ್ರವರಿ13 ಕೊನೆಯ ದಿನಾಂಕವಾಗಿದೆ. ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.