ರಾಷ್ಟ್ರೀಯ ತನಿಖಾ ದಳದ 49ಹುದ್ದೆಗೆ ಅರ್ಜಿ ಆಹ್ವಾನ: ಜನವರಿ 14 ಸರ್ಜಿ ಸಲ್ಲಿಕೆಗೆ ಕೊನೆ ದಿನ
ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿ ಓದಿ

ನ್ಯೂಸ್ ಆ್ಯರೋ: ರಾಷ್ಟ್ರೀಯ ತನಿಖಾ ದಳದಲ್ಲಿ ಒಟ್ಟು 49 ಹುದ್ದೆಗಳು ಖಾಲಿ ಇದ್ದು, ನೇಮಕಾತಿ ಪ್ರಕ್ರಿಯೆ ನಡೆಯುತ್ತಿಎ. ಡೆಪ್ಯುಟಿ ಸೂಪರಿಂಟೆಂಡೆಂಟ್ ಪೊಲೀಸ್, ಹೆಚ್ಚುವರಿ ಸೂಪರಿಂಟೆಂಡೆಂಟ್ ಪೊಲೀಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 14ರಂದು ಕೊನೆ ದಿನವಾಗಿದ್ದು,‌‌ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ:

 • ಸಂಸ್ಥೆ ರಾಷ್ಟ್ರೀಯ ತನಿಖಾ ದಳ
 • ಹುದ್ದೆ ಡೆಪ್ಯುಟಿ ಸೂಪರಿಂಟೆಂಡೆಂಟ್ ಪೊಲೀಸ್, ಹೆಚ್ಚುವರಿ ಸೂಪರಿಂಟೆಂಡೆಂಟ್ ಪೊಲೀಸ್
 • ಒಟ್ಟು ಹುದ್ದೆ 49
 • ಉದ್ಯೋಗದ ಸ್ಥಳ ಪ್ಯಾನ್ ಇಂಡಿಯಾ
 • ವೇತನ ಮಾಸಿಕ ₹ 56,100-2,08,700

ಎಷ್ಟು ಹುದ್ದೆಗಳಿವೆ:

 • ಡೆಪ್ಯುಟಿ ಸೂಪರಿಂಟೆಂಡೆಂಟ್ ಪೊಲೀಸ್- 38
 • ಹೆಚ್ಚುವರಿ ಸೂಪರಿಂಟೆಂಡೆಂಟ್ ಪೊಲೀಸ್- 11

ಅಭ್ಯರ್ಥಿಗಳ ವಿದ್ಯಾರ್ಹತೆ:

ರಾಷ್ಟ್ರೀಯ ತನಿಖಾ ದಳ ನೇಮಕಾತಿ ಅಧಿಸೂಚನೆ ಪ್ರಕಾರ,ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ:

ರಾಷ್ಟ್ರೀಯ ತನಿಖಾ ದಳ ನೇಮಕಾತಿ ಅಧಿಸೂಚನೆ ಪ್ರಕಾರ,ಅಭ್ಯರ್ಥಿಗಳ ವಯಸ್ಸು ಜನವರಿ 14, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ನಿಯಮಾನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ ಎಷ್ಟು ಗೊತ್ತಾ:

 • ಡೆಪ್ಯುಟಿ ಸೂಪರಿಂಟೆಂಡೆಂಟ್ ಪೊಲೀಸ್- ಮಾಸಿಕ ₹ 56,100-1,77,500
 • ಹೆಚ್ಚುವರಿ ಸೂಪರಿಂಟೆಂಡೆಂಟ್ ಪೊಲೀಸ್- ಮಾಸಿಕ ₹ 67,700-2,08,700
 • ಆಯ್ಕೆ ಪ್ರಕ್ರಿಯೆ
 • ಲಿಖಿತ ಪರೀಕ್ಷೆ
 • ಸಂದರ್ಶನ

ಪ್ರಮುಖ ದಿನಾಂಕಗಳು:

 • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/11/2022
 • ಅರ್ಜಿ ಹಾಕಲು ಕೊನೆ ದಿನ: 14/01/2023

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳಾದ ಐಡಿ ಪ್ರೂಫ್, ಶೈಕ್ಷಣಿಕ ದಾಖಲೆಗಳು, ಇತ್ತೀಚಿನ ಪಾಸ್​​ಪೋರ್ಟ್​ ಸೈಜ್ ಫೋಟೋ, ಅನುಭವ ಪ್ರತಿಯೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜನವರಿ 14, 2023 ರೊಳಗೆ ಪೋಸ್ಟ್ ಮುಖಾಂತರ ಕಳುಹಿಸಬೇಕು.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *