ನಿರುದ್ಯೋಗಿ ಯುವಕ– ಯುವತಿಯರಿಗೆ ಗುಡ್‌ನ್ಯೂಸ್‌ – ಸ್ಟಾಫ್ ಸೆಲೆಕ್ಷನ್ ಕಮಿಷನ್‌ನ 5369 ಹುದ್ದೆಗೆ ಅರ್ಜಿ ಆಹ್ವಾನ,

ನಿರುದ್ಯೋಗಿ ಯುವಕ– ಯುವತಿಯರಿಗೆ ಗುಡ್‌ನ್ಯೂಸ್‌ – ಸ್ಟಾಫ್ ಸೆಲೆಕ್ಷನ್ ಕಮಿಷನ್‌ನ 5369 ಹುದ್ದೆಗೆ ಅರ್ಜಿ ಆಹ್ವಾನ,

ನ್ಯೂಸ್‌ ಆ್ಯರೋ : ನಿರುದ್ಯೋಗಿ ಯುವಕ– ಯುವತಿಯರಿಗೆ ಶುಭ ಸುದ್ದಿ. ಸ್ಟಾಫ್ ಸೆಲೆಕ್ಷನ್ ಕಮಿಷನ್ ಮಾರ್ಚ್ 6ರಂದು 11ನೇ ಹಂತದ ಪರೀಕ್ಷೆ/ ಆಯ್ಕೆ ಹುದ್ದೆಗಳ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿದೆ. ಏಪ್ರಿಲ್ 3 ರಿಂದ ಏಪ್ರಿಲ್ 4 ರವರೆಗೆ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ತಿದ್ದುಪಡಿಗಳನ್ನು ಮಾಡಲು ಸಾಧ್ಯವಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ 2023 ರ ಜೂನ್-ಜುಲೈನಲ್ಲಿ ನಡೆಯಲಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 5369 ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ನಡೆಸಲಾಗುತ್ತಿದೆ.

ಅಧಿಸೂಚನೆ ವಿವರ:

  • ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ: ಮಾರ್ಚ್‌ 06
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್‌ 23
  • ಆನ್ ಲೈನ್ ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಮಾರ್ಚ್ 28
  • ಆನ್‌ಲೈನ್‌ ಚಲನ್ ರಚಿಸಲು ಕೊನೆಯ ದಿನಾಂಕ: ಮಾರ್ಚ್‌ 29
  • ಆನ್‌ಲೈನ್‌ ಪಾವತಿ ಸೇರಿದಂತೆ ‘ಅರ್ಜಿ ನಮೂನೆ ತಿದ್ದುಪಡಿ’ ದಿನಾಂಕ: ಏ.03ರಿಂದ ಏ.05
  • ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕಗಳು: ಜೂನ್-ಜುಲೈ 2023

ವಯಸ್ಸಿನ ಮಿತಿ : 11 ನೇಮಕಾತಿ 2023 ಅಧಿಸೂಚನೆಯ ಪ್ರಕಾರ ಎಸ್‌ಎಸ್ಸಿ ಸೆಲೆಕ್ಷನ್ ಪೋಸ್ಟ್ 2023 ಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಕನಿಷ್ಠ 18 ರಿಂದ ಗರಿಷ್ಠ 30 ವರ್ಷಗಳು ಆಗಿದೆ.

ವೇತನ ವಿವರ : ಸಂಬಳವು ಪ್ರದೇಶದ ಆಧಾರದ ಮೇಲೆ ಬದಲಾಗುತ್ತದೆ ಮತ್ತು ಸಂಬಳವು ಹಲವಾರು ಇನ್ಕ್ರಿಮೆಂಟ್ಗಳು, ಭತ್ಯೆಗಳು ಮತ್ತು ಸವಲತ್ತುಗಳನ್ನು ಒಳಗೊಂಡಿದೆ. ಎಸ್‌ಎಸ್ಸಿ ಸೆಲೆಕ್ಷನ್ ಪೋಸ್ಟ್ ಸಂಬಳ 2023 ಲೆವೆಲ್ 1 ರಿಂದ ಲೆವೆಲ್ 7 ರವರೆಗೆ ಮತ್ತು ಮೂಲ ವೇತನ ₹ 5,200 ರಿಂದ ₹ 34,800. ಅದೇ ರೀತಿ, ಗ್ರೇಡ್ ಪೇ ₹ 1,900ರಿಂದ ₹4,800 ವರೆಗೆ ಇರುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು ₹ 100, ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಮತ್ತು ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಎಲ್ಲಾ ಅಭ್ಯರ್ಥಿಗಳು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಶುಲ್ಕ ಮೋಡ್ ಅನ್ನು ಪಾವತಿಸಬಹುದು

ಅರ್ಜಿ ಸಲ್ಲಿಸುವುದು ಹೇಗೆ?:

ssc.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಪೋರ್ಟಲ್‌ಗೆ ನೋಂದಾಯಿಸಿ ಮತ್ತು ಲಾಗಿನ್ ಮಾಡಬೇಕು.
ಪೋಸ್ಟ್ ಆಯ್ಕೆ ಮಾಡಿ, ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು. ಶುಲ್ಕ ಪಾವತಿಸಿ ಮತ್ತು ಅರ್ಜಿ ಸಲ್ಲಿಸಬೇಕು. ಫಾರ್ಮ್ ಡೌನ್ಲೋಡ್ ಮಾಡಿ ಮತ್ತು ಪ್ರಿಂಟ್‌ಔಟ್ ತೆಗೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ: https://ssc.nic.in/SSCFileServer/PortalManagement/UploadedFiles/notice_rhq_06032023.pdf

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *