Kodagu District Court Jobs for 10th, 12th passed

ಕೊಡಗು ನ್ಯಾಯಾಲಯದಲ್ಲಿ ಉದ್ಯೋಗಾವಕಾಶ – SSLC, PUC ಪಾಸಾದವರಿಗೂ ಉದ್ಯೋಗ ; ವಿವರ ಇಲ್ಲಿದೆ..

ನ್ಯೂಸ್ ಆ್ಯರೋ : ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸ್ಟೇನೋಗ್ರಾಫರ್, ಜವಾನ ಸೇರಿದಂತೆ ಒಟ್ಟು 64 ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ವಿವರ:
ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 64 ಹುದ್ದೆಗಳ ಮಾಹಿತಿ ಇಂತಿದೆ.
ಸ್ಟೆನೋಗ್ರಾಫರ್ 2
ಟೈಪಿಸ್ಟ್ 17
ಟೈಪಿಸ್ಟ್- ಕಾಪಿಸ್ಟ್ 7
ಪ್ರೊಸೆಸ್ ಸರ್ವರ್ 8
ಜವಾನ 30

ವಿದ್ಯಾರ್ಹತೆ:
ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಇನ್ನುಳಿದ ಹುದ್ದೆಗಳಿಗೆ ಪಿಯುಸಿ ಉತ್ತೀರ್ಣರಾಗಿರಬೇಕು. ಜೊತೆಗೆ ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರೀಕ್ಷೆಯಲ್ಲಿ ಹಿರಿಯ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಸಾಮಾನ್ಯ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ.ಜಾ, ಪ.ಪಣ ಮತ್ತು ಪ್ರವರ್ಗ 1, ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 150 ರೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 300 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ.ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗೆ ನವೆಂಬರ್ 10ರಿಂದ ಅರ್ಜಿ ಸಲ್ಲಿಕೆ ಆರಂಭ ಆಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಡಿಸೆಂಬರ್ 10 ಆಗಿದೆ. ಈ ಹುದ್ದೆ ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು kodagu.dcourts.gov.in/notice-category/recruitments/ಇಲ್ಲಿಗೆ ಭೇಟಿ ನೀಡಬಹುದಾಗಿದೆ.