KPSC Recruitment 2023 : ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಅಧಿಸೂಚನೆ – 230 ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿ

KPSC Recruitment 2023 : ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಅಧಿಸೂಚನೆ – 230 ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿ

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಒಟ್ಟು 230 ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಈ ಮೊದಲು ಸೆಪ್ಟೆಂಬರ್ 30, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಆದರೆ ಈಗ ಆ ದಿನಾಂಕವನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬಹುದು.

ವಿದ್ಯಾರ್ಹತೆ

ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ

ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 30, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ

ಎಸ್ ಸಿ/ಎಸ್ ಟಿ/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ

ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 3 ವರ್ಷ

PH/ ವಿಧವಾ ಅಭ್ಯರ್ಥಿಗಳು- 10 ವರ್ಷ

ಅರ್ಜಿ ಶುಲ್ಕ

ಎಸ್ ಸಿ/ಎಸ್ ಟಿ/ ಪ್ರವರ್ಗ-1 & PH ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.

ಮಾಜಿ ಸೈನಿಕ ಅಭ್ಯರ್ಥಿಗಳು- 50 ರೂ.

ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 300 ರೂ.

ಸಾಮಾನ್ಯ ಅಭ್ಯರ್ಥಿಗಳು- 600 ರೂ. ನಿಗದಿ ಪಡಿಸಲಾಗಿದ್ದು,

ಆನ್ಲೈನ್ ಮೂಲಕ ಕಟ್ಟಬಹುದು.

ವೇತನ

ಈ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 33,450-62,600 ರೂ. ವೇತನ ನಿಗದಿ ಮಾಡಲಾಗಿದೆ.

ಆಯ್ಕೆ ಪ್ರಕ್ರಿಯೆ

ಕನ್ನಡ ಭಾಷಾ ಪರೀಕ್ಷೆ

ಸ್ಪರ್ಧಾತ್ಮಕ ಪರೀಕ್ಷೆ

ಇನ್ನು ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಅಕ್ಟೋಬರ್ 31ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *