ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – 1.25 ಲಕ್ಷ ವೇತನ, ನೇಮಕಾತಿ ಕುರಿತಂತೆ ಮಾಹಿತಿ ಇಲ್ಲಿದೆ‌‌

ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – 1.25 ಲಕ್ಷ ವೇತನ, ನೇಮಕಾತಿ ಕುರಿತಂತೆ ಮಾಹಿತಿ ಇಲ್ಲಿದೆ‌‌

ನ್ಯೂಸ್ ಆ್ಯರೋ : ಭಾರತೀಯ ಕ್ರೀಡಾ ಪ್ರಾಧಿಕಾರ ಅಧಿಕೃತ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಆ ಮೂಲಕ ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು 12 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 5, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ನೇಮಕಾತಿ ಪೂರ್ಣ ವಿವರ

ಸಂಸ್ಥೆ ಹೆಸರು: ಭಾರತೀಯ ಕ್ರೀಡಾ ಪ್ರಾಧಿಕಾರ

ಹುದ್ದೆ ಹೆಸರು: ಮೆಡಿಕಲ್ ಆಫೀಸರ್

ಖಾಲಿ ಹುದ್ದೆಗಳ ಸಂಖ್ಯೆ: 12

ಶೈಕ್ಷಣಿಕ ಅರ್ಹತೆ

ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು MBBS, ಸ್ನಾತಕೋತ್ತರ ಪದವಿ, DNB ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ವಯೋಮಿತಿ ಎಷ್ಟಿರಬೇಕು?

ಅಭ್ಯರ್ಥಿಗಳ ವಯಸ್ಸು ಇದೇ ವರ್ಷ ಮುಂದಿನ ಅಕ್ಟೋಬರ್ ತಿಂಗಳ 5ಕ್ಕೆ ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

ಮಾಸಿಕ ವೇತನ
1,25,000 ರೂಪಾಯಿ

ಅರ್ಜಿ ಶುಲ್ಕ

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ+ ಸಂದರ್ಶನ

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/09/2023
  • ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 5, 2023

Related post

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ –…

ನ್ಯೂಸ್‌ ಆ್ಯರೋ : ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್​ ಸಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ…
ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್ ಆಯ್ತು ಅಪರೂಪದ ವಿಡಿಯೋ..!

ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್…

ನ್ಯೂಸ್ ಆ್ಯರೋ : ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ ನ ಅಹಮದಾಬಾದ್‌ ನಲ್ಲಿರುವ ಸೈನ್ಸ್ ಸಿಟಿಯಲ್ಲಿ ರೋಬೋಟ್ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಈ ವೇಳೆ ರೋಬೊಟ್ ಪ್ರಧಾನ…

Leave a Reply

Your email address will not be published. Required fields are marked *