
Jobs : 161 ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ವೇತನ 34 ಸಾವಿರ ; ವಿವರ ಇಲ್ಲಿದೆ..
- ಉದ್ಯೋಗ ಮಾಹಿತಿ
- November 3, 2023
- No Comment
- 89
ನ್ಯೂಸ್ ಆ್ಯರೋ : ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ನಿಮ್ಹಾನ್ಸ್ (NIMHANS)ನಲ್ಲಿ ಖಾಲಿ ಇರುವ ನರ್ಸಿಂಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 161 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಬಿಎಸ್ಸಿ ಮತ್ತು ಮಿಡ್ವೈಫ್ ನರ್ಸ್ ಗಳು
ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಒಟ್ಟು 161 ನರ್ಸಿಂಗ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ನರ್ಸಿಂಗ್ ಮಂಡಳಿಗಳಿಂದ ಬಿಎಸ್ಸಿ ನರ್ಸಿಂಗ್ ಪದವಿ ಹೊಂದಿರಬೇಕು. ರಾಜ್ಯ ಅಥವಾ ಭಾರತ ನರ್ಸಿಂಗ್ ಮಂಡಳಿಯಿಂದ ನರ್ಸ್ ಅಥವಾ ಮಿಡ್ವೈಫ್ ನೋಂದಣಿ ಹೊಂದಿರಬೇಕು.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 50 ಹಾಸಿಗೆಯುಳ್ಳ ಆಸ್ಪತ್ರೆಗಳಲ್ಲಿ ಎರಡು ವರ್ಷ ನರ್ಸಿಂಗ್ ಹುದ್ದೆ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು.
ವೇತನ
ಈ ಹುದ್ದೆಗಳಿಗೆ 9,300 ದಿಂದ 34,800ರೂ ವರೆಗೆ ಮಾಸಿಕ ವೇತನ ನಿಗದಿ ಮಾಡಲಾಗಿದೆ.
ವಯೋಮಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ ತುಂಬಿರಬೇಕು. ಕೇಂದ್ರ ಸರ್ಕಾರದ ನಿಯಮದ ಅನುಸಾರ ಮೀಸಲು ಹೊಂದಿರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಸಲ್ಲಿಕೆ
ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಪರಿಶೀಲಿಸಿ ಮುಂದುವರೆಯಬೇಕು. ಅಗತ್ಯ ದಾಖಲಾತಿ ಮತ್ತು ಪ್ರಮಾಣ ಪತ್ರ ಸೇರಿದಂತೆ ಮತ್ತಿತ್ತರ ವಿವರದೊಂದಿಗೆ ಅರ್ಜಿ ಶುಲ್ಕದ ಮಾಹಿತಿಯನ್ನು ಭರಿಸಬೇಕಿದೆ.
ಅರ್ಜಿ ಶುಲ್ಕ
ಈ ಹುದ್ದೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 885 ರೂ. ಅರ್ಜಿ ಶುಲ್ಕ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 1,180 ರೂ ಅರ್ಜಿ ಶುಲ್ಕ ಭರಿಸಬೇಕಿದೆ. ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಇನ್ನು ಈ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು , ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 18 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು nimhans.ac.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.