ಬಿಡಿಎ ನೇಮಕಾತಿ : ಟೈಪಿಸ್ಟ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಡಿಸೆಂಬರ್ 8 ಕೊನೆ ದಿನ, ವಿವರ ಇಲ್ಲಿದೆ.

ಬಿಡಿಎ ನೇಮಕಾತಿ : ಟೈಪಿಸ್ಟ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಡಿಸೆಂಬರ್ 8 ಕೊನೆ ದಿನ, ವಿವರ ಇಲ್ಲಿದೆ.

ನ್ಯೂಸ್ ಆ್ಯರೋ ‌: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಬೆರಳಚ್ಚುಗಾರ ಮತ್ತು ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. ಬ್ಯಾಕ್‌ಲಾಗ್‌ ಹುದ್ದೆಗಳು ಇವಾಗಿದ್ದು, ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ, ನೇಮಕಾತಿ ಪ್ರಕ್ರಿಯೆ, ವಿದ್ಯಾರ್ಹತೆ ಒಳಗೊಂಡ ಮಾಹಿತಿ ಇಲ್ಲಿದೆ.

ವಿದ್ಯಾರ್ಹತೆ

ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲಿಷ್ ಸೀನಿಯರ್ ಗ್ರೇಡ್ ಟೈಪ್‌ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಅರ್ಹತೆ

ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು. ಹಾಗೂ 40 ವರ್ಷ ವಯಸ್ಸು ಮೀರಿರಬಾರದು. ಮಾಜಿ ಸೈನಿಕರು, ಅಂಗವಿಕಲರು / ವಿಧವೆಯರಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿ ಸಡಿಲಿಕೆ ಅನ್ವಯವಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ. ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು – 560020, ಕರ್ನಾಟಕಕ್ಕೆ 08-ಡಿಸೆಂಬರ್-2023 ರಂದು ಅಥವಾ ಮೊದಲು ಕಳುಹಿಸಬೇಕಾಗುತ್ತದೆ.

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-11-2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-ಡಿಸೆಂಬರ್-2023

ಹುದ್ದೆ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ eng.bdabangalore.org ಗೆ ಭೇಟಿ ನೀಡಬಹುದು.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *