ಸ್ಟಾಫ್ ಸೆಲೆಕ್ಷನ್ ಕಮಿಷನ್ : ವಿವಿಧ ವಿಭಾಗಗಳಲ್ಲಿ ಉದ್ಯೋಗಾವಕಾಶ – SSLC ಪಾಸಾದವರಿಗೂ ಭರ್ಜರಿ ಆಫರ್

ಸ್ಟಾಫ್ ಸೆಲೆಕ್ಷನ್ ಕಮಿಷನ್ : ವಿವಿಧ ವಿಭಾಗಗಳಲ್ಲಿ ಉದ್ಯೋಗಾವಕಾಶ – SSLC ಪಾಸಾದವರಿಗೂ ಭರ್ಜರಿ ಆಫರ್

ನ್ಯೂಸ್ ಆ್ಯರೋ : ಸಿಬ್ಬಂದಿ ನೇಮಕಾತಿ ಆಯೋಗದಿಂದ (ಎಸ್ಎಸ್‌ಸಿ) ಒಟ್ಟು 26,146 ಕಾನ್ಸ್ಟೆಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸೇನಾ ಇಲಾಖೆಯ ವಿವಿಧ ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ. 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:
ಬಿಎಸ್ಎಫ್ – 6,174
ಸಿಐಎಸ್ಎಫ್ – 11,025
ಸಿಆರ್ಪಿಎಫ್ – 3,337
ಎಸ್ಎಸ್ಬಿ – 635
ಐಟಿಬಿಪಿ – 3,189
ಅಸ್ಸಾಂ ರೈಫಲ್ಸ್ – 1,490
ಎಸ್ಎಸ್ಎಫ್ – 296

ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ ವಯೋಮಿತಿ 18, ಗರಿಷ್ಠ 23 ವರ್ಷ. ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮಹಿಳಾ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇತರೆ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಗುಣಮಟ್ಟ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗು ಸಂದರ್ಶನದ ಮೂಲಕ ಆಯ್ಕೆ.

ನವೆಂಬರ್ 24ರಿಂದ ಅರ್ಜಿ ಸಲ್ಲಿಕೆ‌ ಪ್ರಕ್ರಿಯೆ ಆರಂಭವಾಗಿದ್ದು, ಡಿಸೆಂಬರ್ 31 ಅರ್ಜಿ ಸಲ್ಲಿಕೆಗೆ ಕಡೆಯ ದಿನ. ಅರ್ಜಿ ಶುಲ್ಕ ಪಾವತಿಗೆ ಜನವರಿ 1 ಕಡೆಯ ದಿನವಾಗಿದೆ. ಈ ಹುದ್ದೆಗಳಿಗೆ ಫೆಬ್ರವರಿ/ಮಾರ್ಚ್ ನಲ್ಲಿ ಕಂಪ್ಯೂಟರ್ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ssc.nic.in ಹಾಗು 080 25502520, 09483862020 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *