ಯುಸಿಐಎಲ್‌ನಿಂದ ಉದ್ಯೋಗಾವಕಾಶ : ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ

ಯುಸಿಐಎಲ್‌ನಿಂದ ಉದ್ಯೋಗಾವಕಾಶ : ಟ್ರೇಡ್‌ ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ

ನ್ಯೂಸ್ ಆ್ಯರೋ : ಯುರೇನಿಯಂ ಕಾರ್ಪೋರೇಷನ್‌ ಆಫ್‌ ಇಂಡಿಯಾವು ಅಗತ್ಯ ಟ್ರೇಡ್‌ ಅಪ್ರೆಂಟಿಸ್ ಪೋಸ್ಟ್‌ಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ನವೆಂಬರ್ 12 ರೊಳಗೆ ಅಪ್ರೆಂಟಿಸ್‌ ಪೋರ್ಟಲ್‌ ಅಥವಾ ಯುಸಿಐಎಲ್‌ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು.

ವಿಭಾಗವಾರು ಹುದ್ದೆಗಳ ವಿವರ

ಒಟ್ಟು 243 ಹುದ್ದೆಗಳು ಖಾಲಿ ಇದ್ದು, ಅಪ್ರೆಂಟಿಸ್ ಹುದ್ದೆಗಳ ಮಾಹಿತಿ

  • ಫಿಟ್ಟರ್ : 82
  • ಇಲೆಕ್ಟ್ರೀಷಿಯನ್ : 82
  • ವೆಲ್ಡರ್ (ಗ್ಯಾಸ್ ಮತ್ತು ಇಲೆಕ್ಟ್ರಿಕ್): 40
  • ಟರ್ನರ್ / ಮಷಿನಿಸ್ಟ್‌ : 12
  • ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್ : 05
  • ಮೆಕ್ಯಾನಿಕಲ್ ಡೀಸೆಲ್ / ಮೆಕ್ಯಾನಿಕಲ್ ಎಂವಿ : 12
  • ಕಾರ್ಪೆಂಟರ್ : 05
  • ಪ್ಲಂಬರ್ : 05

ವಿದ್ಯಾರ್ಹತೆ

ವಿವಿಧ ಟ್ರೇಡ್‌ ನಲ್ಲಿ ಐಟಿಐ ಉತ್ತೀರ್ಣರಾಗಿದ್ದು, ಕನಿಷ್ಠ ಶೇಕಡ.60 ಅಂಕಗಳೊಂದಿಗೆ ಐಟಿಐ ಉತ್ರೀರ್ಣಗೊಂಡ ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು.

ವಯೋಮಿತಿ

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಪ್ಲಿಕೇಶನ್ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಸ್ಟೈಫಂಡ್

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಮಾಸಿಕ ಸ್ಟೈಫಂಡ್ ಅನ್ನು ನೀಡಲಾಗುತ್ತದೆ.

ಇನ್ನು ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ನ.12 ಅರ್ಜಿ ಸಲ್ಲಿಸಲು ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಯುರೇನಿಯಂ ಕಾರ್ಪೋರೇಷನ್‌ ಆಫ್ ಇಂಡಿಯಾ ಲಿಮಿಟೆಡ್ ಅಧಿಕೃತ ವೆಬ್‌ಸೈಟ್‌ https://ucil.gov.in/ ಭೇಟಿ ನೀಡಬಹುದು.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *