
ಪಿಎಸ್‌ಐ ನೇಮಕಾತಿ ಅಕ್ರಮ ನೇಮಕಾತಿ ಪ್ರಕರಣ – ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಹೈಕೋರ್ಟ್
- ಉದ್ಯೋಗ ಮಾಹಿತಿ
- November 10, 2023
- No Comment
- 69
ನ್ಯೂಸ್ ಆ್ಯರೋ : ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಅಕ್ರಮ ಹಗರಣ ಸಂಬಂಧ ಮರುಪರೀಕ್ಷೆ ನಡೆಸುವ ಬಗ್ಗೆ ಇಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಲಿದೆ.
ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ರದ್ದುಪಡಿಸಿ ಎಂದು ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಲಿದ್ದು, ಪಿಎಸ್‌ಐ ಆಗಿ ಆಯ್ಕೆಯಾಗಿದ್ದ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಸರ್ಕಾರದ ಆದೇಶ ರದ್ದು ಕೋರಿ ಎನ್.ವಿ.ಚಂದನ್ ಸೇರಿದಂತೆ ಪಿಎಸ್‌ಐ ಆಯ್ಕೆ ಪಟ್ಟಿಯಲ್ಲಿದ್ದ 100ಕ್ಕೂ ಹೆಚ್ಚು ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿದೆ. ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಇಂದು ಮಧ್ಯಾಹ್ನ ಮಹತ್ವದ ತೀರ್ಪನ್ನು ನೀಡಲಿದೆ.