ಇಂಟಲಿಜೆನ್ಸ್ ಬ್ಯುರೋ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ‌- SSLC ಪಾಸಾದವರೂ ಕೂಡ ಅರ್ಜಿ ಸಲ್ಲಿಸಬಹುದು..! ಮಾಹಿತಿ ಇಲ್ಲಿದೆ..

ಇಂಟಲಿಜೆನ್ಸ್ ಬ್ಯುರೋ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ‌- SSLC ಪಾಸಾದವರೂ ಕೂಡ ಅರ್ಜಿ ಸಲ್ಲಿಸಬಹುದು..! ಮಾಹಿತಿ ಇಲ್ಲಿದೆ..

ನ್ಯೂಸ್ ಆ್ಯರೋ : ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ಇಂಟಲಿಜೆನ್ಸ್ ಬ್ಯುರೋದ (ಐಬಿ) ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಹಾಯಕ ಭದ್ರತಾ- ಎಸ್‌ಎ, ಮೋಟಾರು ಸಾರಿಗೆ ಚಾಲಕ ಮತ್ತು ಮಲ್ಟಿ-ಟಾಸ್ಕಿಂಗ್ ಸ್ಟಾಫ್ ಎಂಟಿಎಸ್ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಆಸಕ್ತರು ಎಂಎಚ್‌ಎ ಅಧಿಕೃತ ವೆಬ್ ಸೈಟ್ mha.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಒಟ್ಟು 677 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್ 14 ರಿಂದ ನವೆಂಬರ್ 13ರವರೆಗೆ ನಡೆಯಲಿದೆ.

ಐಬಿ ಉದ್ಯೋಗ ನೇಮಕಾತಿ ಅಡಿಯಲ್ಲಿ 677 ಹುದ್ದೆಗಳಲ್ಲಿ 362 ಸೆಕ್ಯುರಿಟಿ ಅಸಿಸ್ಟೆಂಟ್, ಮೋಟಾರ್ ಟ್ರಾನ್ಸ್ ಪೋರ್ಟ್ ಹುದ್ದೆ ಮತ್ತು 315 ಮಲ್ಟಿಟಾಸ್ಕಿಂಗ್ ಸಿಬ್ಬಂದಿ ಹುದ್ದೆಗಳಿವೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮಾಧ್ಯಮಿಕ ಶಾಲಾ ಪರೀಕ್ಷೆಯಲ್ಲಿ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಭದ್ರತಾ ಸಹಾಯಕ ಎಕ್ಸಿಕ್ಯೂಟಿವ್ ಹುದ್ದೆಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಮಲ್ಟಿಟಾಸ್ಕಿಂಗ್ ಸಿಬ್ಬಂದಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು 25 ವರ್ಷಗಳಿಗೆ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಐಬಿಯ ಅಧಿಕೃತ ವೆಬ್ ಸೈಟ್ mha.gov.in ಗೆ ಲಾಗಿನ್ ಮಾಡಿ ಮುಖಪುಟದಲ್ಲಿ ಐಬಿ ಮೇಲೆ ಕ್ಲಿಕ್ ಮಾಡಿದಾಗ ಹೊಸ ವೆಬ್ ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ಲಾಗಿನ್ ಐಡಿ ಮತ್ತು ಪಾಸ್ ವರ್ಡ್ ಮಾಡಿ ನೋಂದಾಯಿಸಿಕೊಳ್ಳಬೇಕು. ಬಳಿಕ ಇ-ಮೇಲ್ ಐಡಿ ಅಥವಾ ಫೋನ್ ಸಂಖ್ಯೆಗೆ ಸ್ವೀಕರಿಸಿದ ನೋಂದಣಿ ಐಡಿ ಮತ್ತು ಪಾಸ್ ವರ್ಡ್ ನೊಂದಿಗೆ ಲಾಗ್ ಇನ್ ಮಾಡಿದ ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಅರ್ಜಿದಾರರ ಛಾಯಾಚಿತ್ರ, ಸಹಿ ಮತ್ತು ಇತರ ದಾಖಲೆಗಳನ್ನು ನಿಗದಿತ ನಮೂನೆ ಮತ್ತು ಗಾತ್ರದಲ್ಲಿ ಅಪ್ಲೋಡ್ ಮಾಡಬೇಕು. ಅರ್ಜಿ ನಮೂನೆ ಸಲ್ಲಿಕೆಗೂ ಮೊದಲು ನಿಗದಿದ ಶುಲ್ಕವನ್ನು ಪಾವತಿಸಬೇಕು. ಬಳಿಕ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು ಒಂದು ಕಾಪಿಯನ್ನು ಇಟ್ಟುಕೊಳ್ಳಿ.

Related post

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಆರೋಗ್ಯ ಪರಿಪೂರ್ಣವಾಗಿರುತ್ತದೆ. ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಕುಟುಂಬದೊಂದಿಗೆ…
ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…

Leave a Reply

Your email address will not be published. Required fields are marked *