ಉಡುಪಿ : ಮತ್ತೊಂದು ಗಿನ್ನಿಸ್ ದಾಖಲೆ ಬರೆದ ಯೋಗಬಾಲೆ ತನುಶ್ರೀ ಪಿತ್ರೋಡಿ‌ – ತನುಶ್ರೀ‌ ಮುರಿದ 9ನೇ ದಾಖಲೆ ಯಾವುದು?

ಉಡುಪಿ : ಮತ್ತೊಂದು ಗಿನ್ನಿಸ್ ದಾಖಲೆ ಬರೆದ ಯೋಗಬಾಲೆ ತನುಶ್ರೀ ಪಿತ್ರೋಡಿ‌ – ತನುಶ್ರೀ‌ ಮುರಿದ 9ನೇ ದಾಖಲೆ ಯಾವುದು?

ನ್ಯೂಸ್ ಆ್ಯರೋ : ಯೋಗಬಾಲೆ ತನುಶ್ರೀ ಪಿತ್ರೋಡಿ ಎರಡನೇ ಗಿನ್ನೆಸ್ ದಾಖಲೆಗೆ ಪ್ರಯತ್ನಿಸಿದ್ದಾಳೆ. ಉಡುಪಿಯ ಸೈಂಟ್ ಸಿಸಿಲೀಸ್ ಶಾಲೆಯ ಸಭಾಂಗಣದಲ್ಲಿ ತನ್ನ ಸಹಪಾಠಿಗಳ ಮತ್ತು ಗುರುಗಳ ಸಮ್ಮುಖದಲ್ಲಿ ಈ ಗಿನ್ನೆಸ್ ದಾಖಲೆಯ ಪ್ರಯತ್ನ ಯಶಸ್ವಿಯಾಗಿ ಸಂಪನ್ನಗೊಂಡಿತು.

ತನುಶ್ರೀ ಇದುವರೆಗೆ ಒಟ್ಟು ಎಂಟು ವಿಶ್ವದಾಖಲೆಯನ್ನು ಮಾಡಿದ್ದು ಇದು ಒಂಭತ್ತನೇ ವಿಶ್ವದಾಖಲೆಯ ಪ್ರಯತ್ನವಾಗಿದೆ. ದೇಹದ ಹಿಂಭಾಗಕ್ಕೆ ಎರಡೂ ಕೈಗಳನ್ನು ಚಲಿಸಿ ಎರಡೂ ಕಾಲುಗಳನ್ನು ಸುತ್ತುವರಿದು ಮತ್ತೆ ಮುಂಭಾಗಕ್ಕೆ ಕೈಯ ಚಲನೆ ಮಾಡುವ ಭಂಗಿ ಮೋಸ್ಟ್ ಬ್ಯಾಕ್ವರ್ಡ್ ಸ್ಟೆಪ್ಸ್ ಇನ್ ಒನ್ ಮಿನಿಟ್ ಇದನ್ನು ಆಕೆ ಒಂದು ನಿಮಿಷದಲ್ಲಿ 53 ಬಾರಿ ಮಾಡಿದ್ದಾಳೆ.

ಈ ಹಿಂದಿನ ದಾಖಲೆ ಒಂದು ನಿಮಿಷದಲ್ಲಿ 48 ಬಾರಿ‌ ಇದ್ದು ತನುಶ್ರೀ ಆ ದಾಖಲೆಯನ್ನು ಮುರಿದಿದ್ದಾಳೆ. ಇನ್ನು ಗಿನ್ನೆಸ್ ದಾಖಲೆಯ ಸಂಸ್ಥೆ ಅದನ್ನು ಪರಿಶೀಲಿಸಿ ಬಳಿಕ ಅರ್ಹತಾ ಪತ್ರ ನೀಡಲಿದೆ. ಈ ಸಂದರ್ಭದಲ್ಲಿ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ವಿಭಾ ಸಿಸ್ಟರ್, ಪ್ರೀತಿ ಕ್ರಾಸ್ತಾ, ನಾಟ್ಯ ಗುರು ರಾಮಕೃಷ್ಣ ಕೊಡಂಚ, ಇಂದ್ರಾಳಿ ಜಯಕರ್ ಶೆಟ್ಟಿ, ನಗರಸಭಾ ಸದಸ್ಯೆ ಲಕ್ಷ್ಮೀ ಭಟ್, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related post

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…
ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ…

ನ್ಯೂಸ್ ಆರೋ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ…
ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ನ್ಯೂಸ್ ಆ್ಯರೋ : ಇಂದು  4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಹಲವೆಡೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಸಾಮಾನ್ಯರಂತೆಯೇ ಸರತಿ…

Leave a Reply

Your email address will not be published. Required fields are marked *